ಹುನಗುಂದ ತಾಲೂಕ ನಿವೃತ್ತ ಸಂಘ; ನಾಳೆ ಸಾಮಾನ್ಯ ಸಭೆ ಹಾಗೂ ಸನ್ಮಾನ

Upayuktha
0


ಹುನಗುಂದ: ತಾಲೂಕು ಸರ್ಕಾರಿ ನಿವೃತ್ತ ನೌಕರರ ಹಿತವರ್ಧಕ ಸಂಘದ 27 ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ 70 ವರ್ಷ ಪೂರೈಸಿದ ಹಿರಿಯ ಚೇತನರ ಸನ್ಮಾನ ಕಾರ್ಯಕ್ರಮ 25 ರಂದು ಬುಧವಾರ ಮುಂಜಾನೆ 10-30 ಕ್ಕೆ ಇಲ್ಲಿನ ಗುರುಭವನದಲ್ಲಿ ನಡೆಯುವುದು.


ಸಂಘದ ಅಧ್ಯಕ್ಷ ಎ.ಕೆ. ಉಪನಾಳ ಅಧ್ಯಕ್ಷತೆ ವಹಿಸುವರು. ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಉದ್ಘಾಟಿಸುವರು. ಹಿರಿಯ ಲೇಖಕಿ ಡಾ. ಲಲಿತಾ ಹೊಸಪ್ಯಾಟಿ ಜ್ಯೋತಿ ಬೆಳಗಿಸುವರು. ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ, ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಸಂಗಮೇಶ ಪಾಟೀಲ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಎಂ.ಟಿ. ನಡುವಿನಮನಿ ಮುಖ್ಯ ಅತಿಥಿಗಳಾಗಿರುವರು. ಸಂಘದ ಸರ್ವ ಸದಸ್ಯರು ಸಕಾಲಕ್ಕೆ ಬರಬೇಕೆಂದು ಪ್ರಧಾನ ಕಾರ್ಯದರ್ಶಿ ಬಿ.ವೈ. ಕೊಡಗಾನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top