ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

Upayuktha
0


ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ & ಕಾಮರ್ಸ್ (IMC)ನಲ್ಲಿ ಬಿ.ಕಾಂ ವಿದ್ಯಾರ್ಥಿ ಪರಿಷತ್‌ ಉದ್ಘಾಟನಾ ಕಾರ್ಯಕ್ರಮವು 31 ಜನವರಿ 2026ರಂದು ಪಾಂಡೇಶ್ವರದ ನ್ಯೂ ಕ್ಯಾಂಪಸ್‌ನಲ್ಲಿ ಯಶಸ್ವಿಯಾಗಿ ನಡೆಯಿತು.


ಈ ಕಾರ್ಯಕ್ರಮವನ್ನು ಕರ್ನಾಟಕ ವಿಧಾನ ಪರಿಷತ್‌ನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಉದ್ಘಾಟಿಸಿ, Gen Z, ಡಿಜಿಟಲ್ ಜೀವನಶೈಲಿ ಹಾಗೂ ಶಿಕ್ಷಣದ ನಿಜವಾದ ಅರ್ಥದ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಶಿಕ್ಷಣವೆಂದರೆ ಕೇವಲ ಪದವಿ ಪಡೆಯುವುದು ಅಥವಾ ಉದ್ಯೋಗ ಪಡೆಯುವುದಕ್ಕೆ ಸೀಮಿತವಲ್ಲ, ಅದು ಹೊಣೆಗಾರಿಕೆ, ಜವಾಬ್ದಾರಿ ಹಾಗೂ ವ್ಯಕ್ತಿತ್ವವನ್ನು ರೂಪಿಸುವ ನಿರಂತರ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿಗಳು ತಮಗೆ ಲಭ್ಯವಾಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಶಿಕ್ಷಣವು ಆಕರ್ಷಣೆ ಮತ್ತು ವಿಚಲನೆ ನಡುವಿನ ವ್ಯತ್ಯಾಸವನ್ನು ಗುರುತಿಸಲು ಸಹಾಯ ಮಾಡುತ್ತದೆ ಹಾಗೂ ಗುರಿಗಳತ್ತ ಕೇಂದ್ರೀಕರಿಸಲು ಮಾರ್ಗದರ್ಶನ ನೀಡುತ್ತದೆ ಎಂದರು. ವಿದ್ಯಾರ್ಥಿ ಪರಿಷತ್ಎ ನ್ನುವುದು ಒಂದೇ ರೀತಿಯಾಗಿ ಚಿಂತಿಸುವ, ಒಟ್ಟಾಗಿ ಕೆಲಸ ಮಾಡುವ ಮತ್ತು ಸಾಮೂಹಿಕ ಆಶಯಗಳನ್ನು ಸಾಧಿಸಲು ಶ್ರಮಿಸುವ ತಂಡವಾಗಿದೆ ಎಂದು ಅವರು ಹೇಳಿದರು.


ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ & ಕಾಮರ್ಸ್‌ನ ಡೀನ್ ಡಾ. ವೆಂಕಟೇಶ್ ಎಸ್. ಅಮೀನ್ ಅವರು ಅತಿಥಿಗಳು ಮತ್ತು ಸಭಿಕರನ್ನು ಸ್ವಾಗತಿಸಿ, ವಿದ್ಯಾರ್ಥಿ ನಾಯಕತ್ವ ಹಾಗೂ ಶೈಕ್ಷಣಿಕ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯ ಮಹತ್ವವನ್ನು ವಿವರಿಸಿದರು.


ಬಿ.ಕಾಂ ವಿಭಾಗದ ಮುಖ್ಯಸ್ಥರಾದ ಪ್ರೊ. ಶರ್ಮಿಳಾ ಎಸ್. ಶೆಟ್ಟಿ ಅವರು ವಿದ್ಯಾರ್ಥಿ ಪರಿಷತ್ ಮತ್ತು ಕೌನ್ಸೆಲಿಂಗ್  ಸಮಿತಿಯ ಕಾರ್ಯವಿಧಾನ ಹಾಗೂ ಪಾತ್ರವನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಈ ಸಂದರ್ಭದಲ್ಲಿ ಪ್ರೊ. ಯಶಸ್ವಿನಿ ಎ. ಆಯಿಲ್, ಕೋರ್ಸ್ ಕೋ-ಆರ್ಡಿನೇಟರ್, ACCA ಬಿ.ಕಾಂ ಮತ್ತು ಪ್ರೊ. ರವಿಕುಮಾರ್, ಪ್ಲೇಸ್‌ಮೆಂಟ್ ಕೋ- ಆರ್ಡಿನೇಟರ್, IMC ಉಪಸ್ಥಿತರಿದ್ದರು.


ಕಾರ್ಯಕ್ರಮವು ಪ್ರೊ. ಪ್ರತಿಜ್ಞಾ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಮುಖ್ಯ ಅತಿಥಿಗಳ ಪರಿಚಯವನ್ನು ಪ್ರೊ. ಅಕ್ಷತಾ ವೈ. ಅವರು ನೀಡಿದರು. ಪ್ರೊ. ಹ್ಯಾನ್ಸನ್ ರೇಗೋ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ವಿನುತಾ ಎಚ್. ಕೆ. ವಂದಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top