ಅಫ್ಘಾನ್ ಮೇಲೆ ಪಾಕ್‌ ವೈಮಾನಿಕ ದಾಳಿ: ಭಾರತ ತೀವ್ರ ಖಂಡನೆ

Upayuktha
0


ನವದೆಹಲಿ: ರಂಜಾನ್ ಪವಿತ್ರ ಮಾಸದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಾಗರಿಕರ ಸಾವುನೋವುಗಳಿಗೆ ಕಾರಣವಾದ ಅಫ್ಘಾನ್ ಭೂಪ್ರದೇಶದ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ.


ಈ ಸಂಬಂಧ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಇದು ಪಾಕಿಸ್ತಾನವು ತನ್ನ ಆಂತರಿಕ ವೈಫಲ್ಯಗಳನ್ನು ಹೊರಗೆಡವಲು ಮಾಡಿದ ಮತ್ತೊಂದು ಪ್ರಯತ್ನವಾಗಿದೆ ಎಂದು ಹೇಳಿದರು. ಅಫ್ಘಾನಿಸ್ತಾನದ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ಸ್ವಾತಂತ್ರ್ಯಕ್ಕೆ ಭಾರತದ ಬೆಂಬಲವನ್ನು ಅವರು ಪುನರುಚ್ಚರಿಸಿದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top