ಉಡುಪಿ: ಯಕ್ಷಗಾನ ಕಲಾ ರಂಗ (ರಿ) ವತಿಯಿಂದ ಆಯೋಜಿಸಲಾದ ‘ಜೀವನ ವಿದ್ಯಾ–2026’ ಸನಿವಾಸ ಶಿಬಿರವು ನೂತನ ಯಕ್ಷಗಾನ ಕಲಾರಂಗ ಸಭಾಂಗಣ, ಕುಂಜಿಬೆಟ್ಟು, ಉಡುಪಿಯಲ್ಲಿ ಯಶಸ್ವಿಯಾಗಿ ನಡೆಯಿತು.
ವಿದ್ಯಾಪೋಷಕ್ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಆಯೋಜಿಸಲಾದ ಈ ಶಿಬಿರವು ವ್ಯಕ್ತಿತ್ವ ವಿಕಸನ ಕಾರ್ಯಾಗಾರ ರೂಪದಲ್ಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಜೊತೆಗೆ ನೈತಿಕ ಮೌಲ್ಯಗಳು, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶ ಹೊಂದಿತ್ತು.
ಕಾರ್ಯಕ್ರಮವನ್ನು ಪುತ್ತಿಗೆ ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಪರ್ಯಾಯ ಯೋಜನೆಯಾದ ಕೋಟಿ ಗೀತಾ ಯಜ್ಞದ ಅಂಗವಾಗಿ ಭಗವದ್ಗೀತೆಯ ಲೇಖನ ಯಜ್ಞದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶ್ರೀಪಾದರು ಪ್ರಮಾಣಪತ್ರಗಳನ್ನು ವಿತರಿಸಿ ಪ್ರೋತ್ಸಾಹಿಸಿದರು.
ಸಭೆಯಲ್ಲಿ ವಿವಿಧ ಕ್ಷೇತ್ರಗಳ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದು, ಇಂತಹ ಸನಿವಾಸ ಶಿಬಿರಗಳು ಯುವ ಪೀಳಿಗೆಯಲ್ಲಿ ಮೌಲ್ಯಾಧಾರಿತ ಶಿಕ್ಷಣ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

