ಜ್ಯೋತಿಬಾ ಫುಲೆ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ: ಕೆ.ಜೆ.ವಿ.ಎಸ್ ನಿಂದ ಪ್ರದಾನ

Upayuktha
0

ಹಾಸನ: ಜ್ಞಾನದೇಗುಲವೆಂಬ ಶಾಲೆಯಲ್ಲಿ ಮಕ್ಕಳು ದೇವರಾದರೆ ಅವರನ್ನು ಆರಾಧಿಸುವವರು ಶಿಕ್ಷಕರಾಗಿದ್ದು ಮಕ್ಕಳ ಸರ್ವತೋಮುಖ ಬೆಳವಣಿಗೆ ಮತ್ತು ವಿಕಾಸವೇ ಶಿಕ್ಷಣವೆನ್ನುವ ಜನಜನಿತವಾದ ಮಾತನ್ನು ಮೈಗೂಡಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಾದ ವಿಶ್ವನಾಥ ಡಿ, ಚಿದಾನಂದ ಕೆ.ಎನ್ ಮತ್ತು ಮಮತಾ ಕೆ.ಎಂ ರವರನ್ನು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ಗುರುತಿಸಿ 2025-26 ನೇ ಸಾಲಿನ ಜ್ಯೋತಿಬಾ ಪುಲೆ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ.  


ವಿಜಯಪುರ ಜಿಲ್ಲೆಯ ತಿಡಗುಂದಿ ಗ್ರಾಮೀಣ ಶಿಕ್ಷಣ ಸಂಸ್ಥೆ ಹಾಗೂ ಮಾನಸಗಂಗೋತ್ರಿಯ ಮಾದರಿ ವಸತಿ ಶಾಲೆಯಲ್ಲಿ ವಿಜಯಪುರದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜ್ಯೋತಿ ಬಾಪುಲೆ ಹಾಗೂ ಸಾವಿತ್ರಿಬಾಯಿ ಫುಲೆ ರವರ ಕುರಿತು ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿತ್ತು ಮತ್ತು ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು. 


ಹೊಳೆನರಸೀಪುರ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಳಂಬಿಗೆಯ ಶಿಕ್ಷಕರಾದ ವಿಶ್ವನಾಥ ಡಿ. ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೊಡ್ಡಕಾಡನೂರು ಶಾಲೆಯ ಶಿಕ್ಷಕಿ ಮಮತಾ ಕೆ. ಎಂ ಹಾಗೂ ಹಾಸನ ತಾಲ್ಲೂಕಿನ ಜಿ.ಜಿ.ಜೆ.ಸಿ. (ಪ್ರಧಾನ) ಪ್ರೌಢಶಾಲಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಾದ ಚಿದಾನಂದ ಕೆ.ಎನ್. ರವರು ಪ್ರಶಸ್ತಿಗೆ ಭಾಜನರಾಗಿದ್ದು, ಕೆ.ಜೆ.ವಿ.ಎಸ್ ನ ರಾಜ್ಯ ಕಾರ್ಯದರ್ಶಿ ಈ. ಬಸವರಾಜು ಹಾಗೂ ಹಾಸನ ಜಿಲ್ಲೆಯ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷರಾದ ಚಂದ್ರೇಗೌಡ ಹಾಗೂ ಸದಸ್ಯರುಗಳು ಅಭಿನಂದನೆಗಳನ್ನು ತಿಳಿಸಿರುತ್ತಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top