'ಕಾಸರಗೋಡಿನಲ್ಲಿ ಕನ್ನಡ ಅಸ್ಮಿತೆ' ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿಚಾರ ಸಂಕಿರಣ

Upayuktha
0



ಮಂಜೇಶ್ವರ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮತ್ತು ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಸಹಯೋಗದಲ್ಲಿ ,ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಕನ್ನಡ ವಿಭಾಗ ಮತ್ತು ಗಿಳಿವಿಂಡು ಕನ್ನಡ ಸಾಹಿತ್ಯಕ ಮತ್ತು ಸಾಂಸ್ಕೃತಿಕ ವೇದಿಕೆಯ ಸಹಕಾರದೊಂದಿಗೆ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನಲ್ಲಿ ಫೆ.26ರಂದು 'ಕಾಸರಗೋಡಿನಲ್ಲಿ ಕನ್ನಡ ಅಸ್ಮಿತೆ ಯುವಶಕ್ತಿ ಮತ್ತು ಭವಿಷ್ಯ 'ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣ ನಡೆಯುವುದು.


ಬೆಳಗ್ಗೆ 10 ಗಂಟೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ ಪುರುಷೋತ್ತಮ ಬಿಳಿಮಲೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷ ಡಾ. ರಮಾನಂದ ಬನಾರಿ ಅಧ್ಯಕ್ಷತೆ ವಹಿಸುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ, ಸಾಹಿತಿ,ಪತ್ರಕರ್ತ ರಾಧಾಕೃಷ್ಣ.ಕೆ ಉಳಿಯತ್ತಡ್ಕ ಅತಿಥಿಗಳಾಗಿರುವರು. ಖ್ಯಾತ ಸಾಹಿತಿ ಡಾ ರಮಾನಂದ ಬನಾರಿ ಅವರ ಸಾರಥ್ಯದಲ್ಲಿ ಪ್ರಕಟಗೊಳ್ಳುತ್ತಿರುವ 'ಕನ್ನಡಿಯಲ್ಲಿ ಕನ್ನಡಿಗ 'ಕೃತಿ ಸರಣಿಯ ಆರನೇ ಸಂಚಿಕೆಯನ್ನು ಸಾಹಿತಿ, ನಿವೃತ್ತ ಪ್ರಾಧ್ಯಾಪಿಕೆ ಡಾ. ಪ್ರಮೀಳಾ ಮಾಧವ್ ಬಿಡುಗಡೆ ಮಾಡುವರು.


ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಪ್ರಾಂಶುಪಾಲ ಡಾ. ಮಹಮ್ಮದಾಲಿ ಪ್ರಾಸ್ತಾವಿಕ ಭಾಷಣ ಮಾಡುವರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯದರ್ಶಿ ಡಾ. ಕಿಶೋರ್ ಕುಮಾರ್ ರೈ ಶೇಣಿ,ಕೋಶಾಧಿಕಾರಿ ವಿಶಾಲಾಕ್ಷ ಪುತ್ರಕಳ, ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶಿವಶಂಕರ. ಪಿ ಉಪಸ್ಥಿತರಿರುವರು.


ಬಳಿಕ ಕಾಸರಗೋಡಿನ ಕನ್ನಡದ ಇತಿಹಾಸ ಮತ್ತು ಸವಾಲುಗಳ ಕುರಿತು ವಿಚಾರಗೋಷ್ಠಿ ನಡೆಯುವುದು. ಆಕಾಶವಾಣಿಯ ವಿಶ್ರಾಂತ ನಿರ್ದೇಶಕ ಡಾ. ಸದಾನಂದ ಪೆರ್ಲ (ಕಾಸರಗೋಡಿನ ಕನ್ನಡ ಹೋರಾಟದ ಇತಿಹಾಸ), ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಕರಾದ ರಾಧಾಕೃಷ್ಣ ಬೆಳ್ಳೂರು (ಕನ್ನಡ ಸಾಹಿತ್ಯ ಮತ್ತು ಕನ್ನಡ ಅಸ್ಮಿತೆ), ಡಾ. ಬಾಲಕೃಷ್ಣ ಹೊಸಂಗಡಿ (ಶೈಕ್ಷಣಿಕ ಮತ್ತು ಔದ್ಯೋಗಿಕ ಸವಾಲುಗಳು) ಡಾ. ಶ್ರೀಧರ.ಎನ್ (ಸಾಂಸ್ಕೃತಿಕ ಮತ್ತು ರಾಜಕೀಯ ಸವಾಲುಗಳು), ಕು. ದೀಕ್ಷಿತ (ಕನ್ನಡ ವಿದ್ಯಾರ್ಥಿಗಳ ಸಮಸ್ಯೆಗಳು), ಅನಿರುದ್ಧ (ಕನ್ನಡದ ಅಸ್ತಿತ್ವ- ವಿದ್ಯಾರ್ಥಿಗಳ ಪಾತ್ರ) ಪ್ರಬಂಧ ಮಂಡನೆ ಮಾಡುವರು. ಸಹಾಯಕ ಪ್ರಾಧ್ಯಾಪಕ ಡಾ ಸುಜೀಶ್. ಎಸ್ ಸಮನ್ವಯಕಾರರಾಗಿರುವರು.


ಅಪರಾಹ್ನ ಸಾಂಸ್ಕೃತಿಕ ವಲಯದ ಕನ್ನಡ ಅಸ್ಮಿತೆಯ ಕುರಿತು ಸಂವಾದ ಕಾರ್ಯಕ್ರಮ ನಡೆಯುವುದು. ಸಾಹಿತಿ ಡಾ. ಮಹೇಶ್ವರಿ.ಯು, ಯಕ್ಷಗಾನ ಗುರು ಶಿವಶಂಕರ ದಿವಾಣ, ರಂಗ ನಿರ್ದೇಶಕ ಉದಯ ಸಾರಂಗ್, ಗಮಕಿ ಶಶಿರಾಜ ನೀಲಂಗಳ, ವಿದುಷಿ ಅನುಪಮಾ ರಾಘವೇಂದ್ರ ಉಡುಪುಮೂಲೆ,  ಶ್ರೀಧರ ರೈ ಕಾಸರಗೋಡು ಸಂಪನ್ಮೂಲ ವ್ಯಕ್ತಿಗಳಾಗಿರುವರು. ಕಾರ್ತಿಕ್ ಪಿ.ಕೆ, ಶ್ರದ್ಧಾ ಭಟ್, ದೇವಿಕಾ.ಪಿ, ಆದಿಶ್ರೀ ಎಸ್.ಎನ್, ಎ. ವಿವೇಕ್, ಮನೀಶ್, ಪೂಜಾ, ಶಿವಾನಿ.ಕೆ, ಕೃಷ್ಣ ಪ್ರಣಾಮ್ ಸಂವಾದದಲ್ಲಿ ಪಾಲ್ಗೊಳ್ಳುವರು.


ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಖ್ಯಾತ ವಿಮರ್ಶಕ ಡಾ. ಎಸ್ .ಆರ್ ವಿಜಯಶಂಕರ್ ಬೆಂಗಳೂರು ಸಮಾರೋಪ ಭಾಷಣ ಮಾಡುವರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷ ಪ್ರೊ. ಪಿ.ಎನ್ ಮೂಡಿತ್ತಾಯ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಸಮಿತಿ ಅಧ್ಯಕ್ಷ ಮುರಳೀಧರ ಬಳ್ಳಕ್ಕುರಾಯ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ.ಎ, ಸಹಾಯಕ ಪ್ರಾಧ್ಯಾಪಕಿ ಜಯಂತಿ.ಕೆ, ಆಯಿಶಾ ಪೆರ್ಲ ಉಪಸ್ಥಿತರಿರುವರು.


ವಿಚಾರ ಸಂಕಿರಣದ ಆಮಂತ್ರಣ ಪತ್ರಿಕೆಯನ್ನು ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲ ಡಾ. ಮಹಮ್ಮದಾಲಿ ಬಿಡುಗಡೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯದರ್ಶಿ ಡಾ. ಕಿಶೋರ್ ಕುಮಾರ್ ರೈ ಶೇಣಿ, ಲೇಖಕರ ಸಂಘದ ಕೋಶಾಧಿಕಾರಿ ವಿಶಾಲಾಕ್ಷ ಪುತ್ರಕಳ, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶಿವಶಂಕರ. ಪಿ, ಸಹಾಯಕ ಪ್ರಾಧ್ಯಾಪಕ ಡಾ.ಸುಜೀಶ್.ಎಸ್, ಎ. ವಿವೇಕ್ ಅನಿರುದ್ಧ ಮೊದಲಾದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top