ಬಾಲಕಿಯರು ಚಾಂಪಿಯನ್ಸ್ ಹಾಗೂ ಬಾಲಕರು ರನ್ನರ್ಸ್
ಮೂಡುಬಿದಿರೆ: ತಮಿಳುನಾಡಿನ ಈರೋಡಿನಲ್ಲಿ ಮುಕ್ತಾಯಗೊಂಡ 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್‍ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಬಾಲಕಿಯರನ್ನೊಳಗೊಂಡ ತಂಡ ಚಾಂಪಿಯನ್ಸ್ ಪಟ್ಟ ಅಲಂಕರಿಸಿದರೆ, ಬಾಲಕರ ತಂಡ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು.
ಪೈನಲ್‍ನಲ್ಲಿ ಕರ್ನಾಟಕ ಬಾಲಕಿಯರ ತಂಡ ಕಳೆದ ಬಾರಿಯ ಚಾಂಪಿಯನ್ ತಮಿಳುನಾಡು ವಿರುದ್ಧ 35-25, 35-31 ನೇರ ಸೆಟ್‍ಗಳಿಂದ ಗೆದ್ದು ಚಾಂಪಿಯನ್ಸ್ ಪಟ್ಟ ಅಲಂಕರಿಸಿದರೆ, ಬಾಲಕರ ತಂಡ ತಮಿಳುನಾಡು ವಿರುದ್ಧ 26-35, 27-35 ನೇರ ಸೆಟ್‍ಗಳಿಂದ ಪರಾಭವಗೊಂಡು ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು. ಕರ್ನಾಟಕ ತಂಡದಲ್ಲಿ ಬಾಲಕಿಯರ ವಿಭಾಗದಲ್ಲಿ ಆರು ಮಂದಿ ಹಾಗೂ ಬಾಲಕರ ವಿಭಾಗದಲ್ಲಿ ನಾಲ್ಕು ಮಂದಿ ಆಳ್ವಾಸ್ ಕ್ರೀಡಾಪಟುಗಳು ಪಾಲ್ಗೊಂಡು ಶ್ರೇಷ್ಠ ಸಾಧನೆ ಮೆರೆಯಲು ಸಹಕರಿಸಿದರು.
ವಿಜೇತ ಕರ್ನಾಟಕ ತಂಡದ ಪರವಾಗಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಚರಣ್ ಹಾಗೂ ಬಾಲಕಿಯರ ತಂಡದಲ್ಲಿ ರಾಜ್ಯ ತಂಡದ ನಾಯಕಿಯಾಗಿದ್ದ ಆಳ್ವಾಸ್‍ನ ಗೀತಾ ಹಾಗೂ ಶುಭಶ್ರೀ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ ಪಡೆದುಕೊಂಡರು. ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮೆರೆದ ಕರ್ನಾಟಕ ತಂಡಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಶ್ಲಾಘಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpeg)
