ಬೆಂಗಳೂರು: ಗಿರಿನಗರದ ನಿವಾಸಿಗಳಾದ ನಾಗಶ್ರೀ ಹೆಚ್.ವಿ ಹಾಗೂ ನಾಗಭೂಷಣ್ ಆರ್ ಅವರ ಪುತ್ರ ಪನ್ನಗಭೂಷಣ ಅವರು ವಿಶಿಷ್ಟ ಸಾಧನೆಯ ಮೂಲಕ ಕರ್ನಾಟಕ ರಾಜ್ಯಕ್ಕೆ ಗೌರವ ತಂದಿದ್ದಾರೆ. ಲಿಟಲ್ ಫ್ಲವರ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಯಾಗಿರುವ ಅವರು ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿ, ಪ್ರಧಾನಮಂತ್ರಿಗಳಿಂದ ನಡೆಸಲ್ಪಟ್ಟ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಜನವರಿ 22ರಂದು ನವದೆಹಲಿಯಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಪನ್ನಗ ಭೂಷಣ ಅವರು ತಮ್ಮ ಕೊಳಲು ವಾದನವನ್ನು ಪ್ರಸ್ತುತಪಡಿಸಿ ಭಾಗವಹಿಸಿದವರ ಮನಸೆಳೆದರು. ಜೊತೆಗೆ ವಿದ್ಯಾರ್ಥಿಗಳೊಂದಿಗೆ ನಡೆದ ಪ್ರಶ್ನೋತ್ತರ ಸಂವಾದದಲ್ಲೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಮೆರೆದರು.
ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ವಿದ್ಯಾರ್ಥಿಗಳಿಗೆ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಶಿಸ್ತು, ಸಂಯಮ, ಸಮಯಪಾಲನೆ ಮತ್ತು ವಿನಯದ ಮಹತ್ವವನ್ನು ಸರಳವಾಗಿ ವಿವರಿಸಿದರು. ಕೇವಲ ಅಂಕಗಳು ಮಾತ್ರ ಜೀವನವನ್ನು ರೂಪಿಸುವುದಿಲ್ಲ; ಅಂಕಗಳಾಚೆಗೂ ವ್ಯಕ್ತಿತ್ವ ವಿಕಸನ ಅಗತ್ಯವೆಂದು ಅವರು ಬೋಧಿಸಿದರು. ವಿಕಸಿತ ಭಾರತ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ಈಗಿನಿಂದಲೇ ಪರಿಶ್ರಮ ವಹಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿಗಳು ಪ್ರೀತಿಯಿಂದ ಹಾಗೂ ಗೌರವದಿಂದ ಸನ್ಮಾನಿಸಿದರು. ಈ ವರ್ಷದ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮಕ್ಕೆ ದೇಶಾದ್ಯಂತ ಸುಮಾರು ನಾಲ್ಕೂವರೆ ಕೋಟಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪ್ರತಿಯೊಂದು ರಾಜ್ಯದಿಂದ ಒಬ್ಬ ವಿದ್ಯಾರ್ಥಿ ಹಾಗೂ ಪ್ರತಿಯೊಂದು ಕೇಂದ್ರಾಡಳಿತ ಪ್ರದೇಶದಿಂದ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ ನವದೆಹಲಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಅತ್ಯಂತ ಸರಳ ಹಾಗೂ ಅರ್ಥಪೂರ್ಣ ರೀತಿಯಲ್ಲಿ ಜರುಗಿದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ತುಂಬಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


