ದಿ. ಡಾ. ಹೆಚ್. ಟಿ. ಮನೋರಮಾ ರಾವ್ ಸ್ಮಾರಕ ದತ್ತಿ ಉಪನ್ಯಾಸ

Upayuktha
0


ಮಂಗಳೂರು, ಫೆ 10: ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆ ಮತ್ತು ಮಹಿಳಾ ವೈದ್ಯರ ಸಂಘದ ಜಂಟಿ ಆಶ್ರಯದಲ್ಲಿ ಮಾನವೀಯ ಮೌಲ್ಯದ ಜೊತೆ ವೈದ್ಯಕೀಯ ಸೇವೆ ಸಲ್ಲಿಸಿ ನೂರಾರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಕ್ಷಣ, ತರಬೇತಿ, ಮಾರ್ಗದರ್ಶನ ನೀಡಿದ ಹಿರಿಯ ಗುರು, ನಗರದ ಖ್ಯಾತ ಸ್ತ್ರೀ ಆರೋಗ್ಯ ಮತ್ತು ಪ್ರಸೂತಿ ತಜ್ಞೆ ದಿ. ಡಾ. ಹೆಚ್. ಟಿ. ಮನೋರಮಾ ರಾವ್ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮವು ಸೋಮವಾರ (ಫೆ.9) ಐ.ಎಂ.ಎ. ಡಾ. ಎ.ವಿ. ರಾವ್ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಸದಾನಂದ ಪೂಜಾರಿಯವರ ನೇತೃತ್ವದಲ್ಲಿ ಜರಗಿತು.


ತುಮಕೂರು ನಗರದ ಖ್ಯಾತ ಸ್ತ್ರೀ ಆರೋಗ್ಯ ಮತ್ತು ಪ್ರಸೂತಿ ತಜ್ಞ ಹಾಗೂ ಕಸ್ತೂರ್ಬಾ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ದುರ್ಗಾದಾಸ್ ಅಸ್ರಣ್ಣ ಅವರು ಅತಿಥಿ ಉಪನ್ಯಾಸಕರಾಗಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತಮ್ಮ ದತ್ತಿ ಉಪನ್ಯಾಸದಲ್ಲಿ ಸಿಝೇರಿಯನ್ ಶಸ್ತ್ರ ಚಿಕಿತ್ಸೆಯಲ್ಲಿ ಪ್ರಸ್ತುತ ಬೆಳವಣಿಗೆ, ಪರಿಕಲ್ಪನೆ, ಪ್ರಗತಿ ಮತ್ತು ಸಾಧಕ, ಬಾಧಕಗಳ ಮಾಹಿತಿ ನೀಡಿ ಅಧಿಕ ಪ್ರಮಾಣದಲ್ಲಿ ದೇಶದಲ್ಲಿ ವಾರ್ಷಿಕ ಶೇ. 21.5 ಸಿಝರಿಯನ್ ಶಸ್ತç ಚಿಕಿತ್ಸೆಯು ಜರಗುತ್ತದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆ, ಮತ್ತು ಸಾಧಿಸಿದ ಸಾಧನೆಗಳನ್ನು ಪರಿಗಣಿಸಿ ಸನ್ಮಾನಿಸಲಾಯಿತು.


ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ ನಿವೃತ್ತ ಮತ್ತು ಹಿರಿಯ ಸ್ತ್ರೀ ಆರೋಗ್ಯ ತಜ್ಞರಾದ ಡಾ. ವಸಂತಿ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ದಿ. ಡಾ. ಮನೋರಮಾ ರಾವ್ ರವರು ಕೆ.ಎಂ.ಸಿ. ಕಾಲೇಜಿನಲ್ಲಿ ಉತ್ತಮ ಶಿಕ್ಷಕಿಯಾಗಿ ಹಾಗೂ ವಿಭಾಗಿಯ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಗೌರವಕ್ಕೆ ಪಾತ್ರರಾಗಿದ್ದರು ಎಂದು ನುಡಿದರು.


ನಗರದ ಲೇಡಿ ಗೋಶನ್ ಆಸ್ಪತ್ರೆಯ ವೈದ್ಯಕೀಯ ಆಧೀಕ್ಷರಾದ ಡಾ. ದುರ್ಗಾಪ್ರಸಾದ್ ಎಂ.ಆರ್. ಗೌರವ ಅತಿಥಿಯಾಗಿ ಪಾಲ್ಗೊಂಡು, ಅವರು ಲೇಡಿ ಗೋಶನ್ ಆಸ್ಪತ್ರೆಯಲ್ಲಿ ಸಲ್ಲಿಸಿದ ಸುಧೀರ್ಘ ನಿಸ್ವಾರ್ಥ ಮತ್ತು ಪ್ರಾಮಾಣಿಕ ಸೇವೆಯನ್ನು ಸ್ಮರಿಸಿದರು. ಸಂಸ್ಥೆಯ ಅದ್ಯಕ್ಷರಾದ ಡಾ. ಸದಾನಂದ ಪೂಜಾರಿಯವರು ಸ್ವಾಗತಿಸಿದರು.


ಮಹಿಳಾ ವೈದ್ಯ ಸಂಘದ ಅಧ್ಯಕ್ಷರಾದ ಡಾ. ಪ್ರೇಮಾ ಡಿ’ಕುನ್ಹಾ ರವರು ದಿ. ಡಾ. ಮನೋರಮಾ ರಾವ್ ರವರ ವೃತ್ತಿ ಸೇವೆ, ಶೈಕ್ಷಣಿಕ ಸೇವೆ, ಸಾಧನೆ ಮತ್ತು ವಿವಿಧ ಪ್ರಶಸ್ತಿಗಳಿಗೆ ಪಾತ್ರರಾದ ಮಾಹಿತಿ ನೀಡಿದರು. ವೇದಿಕೆಯಲ್ಲಿ ನಗರದ ಜಯಶ್ರೀ ಆಸ್ಪತ್ರೆಯ ಖ್ಯಾತ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಹೆಚ್. ಟಿ. ಜಯಪ್ರಕಾಶ್ ರಾವ್, ಸಂಸ್ಥೆಯ ಚುನಾಯಿತ ಅಧ್ಯಕ್ಷ ಡಾ. ಉಲ್ಲಾಸ್ ಶೆಟ್ಟಿ, ಕೋಶಾಧಿಕಾರಿ ಡಾ. ಜೂಲಿಯನ್ ಸಲ್ಡಾನ್ಹ ಉಪಸ್ಥಿತರಿದ್ದರು. ಡಾ. ಮಧುರಾ ಭಟ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಡಾ. ಪ್ರಕಾಶ್ ಹರಿಶ್‌ಚಂದ್ರರವರು ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top