ಶಿವಪುರ ಕುಂಪಲದಲ್ಲಿ ಸಾಹಿತ್ಯ–ಗಾನ–ನೃತ್ಯ ಕಾರ್ಯಕ್ರಮ

Upayuktha
0


ಕಾಸರಗೋಡು: ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ 179ನೇ ಸಾಹಿತ್ಯ–ಗಾನ–ನೃತ್ಯ ಕಾರ್ಯಕ್ರಮವು ಶಿವಮಣಿ ಪುತ್ತೂರು ಅವರ ಆಯೋಜಕತ್ವದಲ್ಲಿ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರ, ಶಿವಪುರ ಕುಂಪಲದಲ್ಲಿ ಮಹಾಶಿವರಾತ್ರಿ ಹಾಗೂ ಕುಂಪಲ ರಥೋತ್ಸವದ ಪ್ರಯುಕ್ತ ಜರುಗಿತು.


ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷರಾದ ಡಾ. ವಾಣಿಶ್ರೀಯವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಸಾದರಪಡಿಸಿದರು. ಗಾಯಕಿ ಮಧುಲತಾ ಅವರು ಹಾಡುಗಳನ್ನು ಹಾಡಿದರು.


ಈ ಸಂದರ್ಭದಲ್ಲಿ ಕು. ವಿನಂತಿಯವರ ರಿಂಗ್ ಡ್ಯಾನ್ಸ್, ಸನ್ನಿಧಿ ಹಾಗೂ ಆರತಿ ಅವರ ನೃತ್ಯ ಪ್ರದರ್ಶನಗಳು ನಡೆದವು. ಇತರ ಕಲಾವಿದರಿಂದಲೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.


ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ಕಲಾವಿದರಿಗೆ ಸಂಸ್ಥೆಯ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top