ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ಪದವು ಪಶ್ಚಿಮ ವಾರ್ಡಿನ ತಿಂಪೈ ಕಾಲೋನಿ, ಕಾನಡ್ಕ ಶಕ್ತಿನಗರದ ಬಳಿ ಇರುವ ಶ್ರೀ ಕೃಷ್ಣ ಭಜನಾ ಮಂದಿರ ಟ್ರಸ್ಟ್ (ರಿ.) ವತಿಯಿಂದ ರೂ.10 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿತು. ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕರು, ಶ್ರೀ ಕೃಷ್ಣ ಭಜನಾ ಮಂದಿರವು ಹಲವು ವರ್ಷಗಳಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಇಂತಹ ಪವಿತ್ರ ಪರಿಸರದಲ್ಲಿ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕೆಂಬ ಸ್ಥಳೀಯರ ಮನವಿಗೆ ಸ್ಪಂದಿಸಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವ ಭರವಸೆಯನ್ನು ಅವರು ನೀಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಶ್ರೀಮತಿ ವನಿತಾ ಪ್ರಸಾದ್, ಶ್ರೀಮತಿ ಶಕೀಲಾ ಖಾವಾ, ವಿಎಚ್‌ಪಿ ಮುಖಂಡ ಎಚ್.ಕೆ. ಪುರುಷೋತ್ತಮ್, ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ ಸೇರಿದಂತೆ ಪ್ರಮುಖರಾದ ರವಿಚಂದ್ರ, ಸುಂದರ್ ಅಂಚನ್, ವಿನೋದ್ ಮುಗ್ರೋಡಿ, ಶುಭಕರ, ಅವಿನಾಶ್ ಅಂಚನ್, ಕೇಶವ, ಡಾ. ಚಂದ್ರಶೇಖರ, ಅಶೋಕ್ ನಾಯಕ್, ಪ್ರಸಾದ್ ಶಕ್ತಿನಗರ, ಗಣೇಶ್, ವಿಜಯ್ ಶೆಣೈ, ಕಿಶನ್, ಶಿವಪ್ಪಣ್ಣ, ಅಮೃತ ಟೀಚರ್, ಲತಾ ಮತ್ತಿತರರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


