ಶ್ರೀ ಕೃಷ್ಣ ಮಠದಲ್ಲಿ ಇಂದು ಮಹಾಪೂಜೆ, ಧಾರ್ಮಿಕ ಉಪನ್ಯಾಸ ಮತ್ತು ಗರುಡ ರಥೋತ್ಸವ

Upayuktha
0


ಉಡುಪಿ, ಫೆ. 11: ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನವಾದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ ಬುಧವಾರ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆಯಲಿವೆ.


ಬೆಳಿಗ್ಗೆ ಘಂಟೆ 10.30ಕ್ಕೆ ಮಹಾಪೂಜೆ ನಡೆಯಲಿದೆ. ಸಂಜೆ ಘಂಟೆ 5ಕ್ಕೆ ಚಂದ್ರಶಾಲೆಯಲ್ಲಿ ಪುರಾಣ ವಾಚನ ಕಾರ್ಯಕ್ರಮ ನಡೆಯಲಿದ್ದು, ‘ಹರಿವಂಶ’ ವಿಷಯವನ್ನು ಡಾ. II ಎಂ. ಉದಯಕುಮಾರ (ಸರಳತ್ತಾಯ) ವಾಚನ ಮಾಡಲಿದ್ದಾರೆ.


ಸಂಜೆ ಘಂಟೆ 6ರಿಂದ ರಾಜಾಂಗಣದಲ್ಲಿ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ‘ಶ್ರೀಕೃಷ್ಣಾಷ್ಟೋತ್ತರದಲ್ಲಿರುವ ಕೃಷ್ಣನ ಮಹಿಮೆ’ ವಿಷಯವಾಗಿ ಪ್ರವಚನ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ವಾನ್ ಲಕ್ಷ್ಮೀಶ ಭಟ್ಟ ಮುದರಂಗಡಿ ಅವರು ‘ಮಹಾಭಾರತ ತಾತ್ಪರ್ಯ ನಿರ್ಣಯ’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.


ಸಂಜೆ ಘಂಟೆ 7ರಿಂದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಕಲಾಶ್ರೀ ನೃತ್ಯ ಬಳಗ, ಮಂಗಳೂರು ಇವರಿಂದ ಶ್ರೀಮತಿ ದೀಪಾ ಪ್ರವೀಣ್ ಅವರ ಭರತನಾಟ್ಯ ಪ್ರದರ್ಶನ ನಡೆಯಲಿದೆ. ಇದೇ ಸಮಯದಲ್ಲಿ ಚಾಮರಸೇವೆ ಹಾಗೂ ರಾತ್ರಿ ಪೂಜೆ ನೆರವೇರಲಿದ್ದು, ಘಂಟೆ 7.30ಕ್ಕೆ ಗರುಡ ರಥೋತ್ಸವವು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಈ ಸೇವೆಗೆ ಅಶ್ವಿನ್, ಸಿಂಗಾಪುರ ಅವರು ಸೇವಾಕರ್ತರಾಗಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top