ಮುರ್ಡೇಶ್ವರ: ಫೆಬ್ರವರಿ 8ರಂದು ಬೃಹತ್ ಹಿಂದೂ ಸಮಾವೇಶ

Upayuktha
0


ಮುರ್ಡೇಶ್ವರ: ಹಿಂದೂ ಸಮಾಜದ ಏಕತೆ ಹಾಗೂ ಸಾಂಸ್ಕೃತಿಕ ಮೌಲ್ಯಗಳ ರಕ್ಷಣೆಯ ಉದ್ದೇಶದಿಂದ ಹಿಂದೂ ಸಮ್ಮೇಳನ ಸಮಿತಿಯ ಆಶ್ರಯದಲ್ಲಿ ಬೃಹತ್ ಹಿಂದೂ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾವೇಶವು 2026ರ ಫೆಬ್ರವರಿ 8ರಂದು (ಭಾನುವಾರ) ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.


ಶ್ರೀ ಮುರ್ಡೇಶ್ವರ ದೇವಾಲಯದ ಮಹಾದ್ವಾರದ ಬಳಿ ಶೋಭಾಯಾತ್ರೆ ಹಾಗೂ ಧರ್ಮಸಭೆ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮವು ಸಂಜೆ 3.30 ಗಂಟೆಗೆ ಆರಂಭವಾಗಲಿದೆ. ಸಮಾವೇಶದ ಅಂಗವಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.


ಈ ಬೃಹತ್ ಸಮಾವೇಶದಲ್ಲಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸೇರಿದಂತೆ ಧಾರ್ಮಿಕ ಕ್ಷೇತ್ರದ ಗಣ್ಯರು, ಸಾಧು-ಸಂತರು ಹಾಗೂ ಸಮಾಜದ ಪ್ರಮುಖರು ಭಾಗವಹಿಸಲಿದ್ದಾರೆ. ಹಿಂದೂ ಸಮಾಜವನ್ನು ಸಂಘಟಿತಗೊಳಿಸುವುದು, ಧಾರ್ಮಿಕ ಮೌಲ್ಯಗಳ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿಯನ್ನು ಮೂಡಿಸುವುದು ಈ ಸಮಾವೇಶದ ಪ್ರಮುಖ ಉದ್ದೇಶವಾಗಿದೆ.


ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದ್ದು, ಮುರ್ಡೇಶ್ವರ ಮಹಾದ್ವಾರದ ಸಮೀಪದ ಸುಮಾರು 2 ಎಕರೆ ಪ್ರದೇಶದಲ್ಲಿ ಕಾರ್ಯಕ್ರಮಗಳು ನಡೆಯಲಿವೆ.


ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top