ಸಾರ್ವಜನಿಕರು ಭಾಗವಹಿಸಲು ಕೋರಿಕೆ
ಮಂಗಳೂರು: ರಮಕೃಷ್ಣ ಮಿಷನ್ ಮಂಗಳೂರು ಹಾಗೂ ಸ್ವಚ್ಛ ಮಂಗಳೂರು ಪ್ರತಿಷ್ಠಾನ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ ತಿಂಗಳ ಮಾಸಿಕ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಭಾನುವಾರ (ಮಾರ್ಚ್ 1) ಬೆಳಿಗ್ಗೆ 7.15ಕ್ಕೆ ಆಯೋಜಿಸಲಾಗಿದೆ.
ಈ ಸ್ವಚ್ಛತಾ ಶ್ರಮದಾನವು ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಮುಂಭಾಗದ ಪರಿಸರದಲ್ಲಿ ನಡೆಯಲಿದ್ದು, ಸ್ಥಳೀಯ ನಾಗರಿಕರು, ಸ್ವಯಂಸೇವಕರು ಹಾಗೂ ಸ್ವಚ್ಛತೆಗೆ ಆಸಕ್ತಿಯಿರುವ ಎಲ್ಲರೂ ಭಾಗವಹಿಸಿ ಪರಿಸರ ಸ್ವಚ್ಛತೆಯ ಜಾಗೃತಿ ಮೂಡಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.
ನಗರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ಪ್ರತಿ ತಿಂಗಳು ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಸಾರ್ವಜನಿಕರ ಸಹಕಾರದಿಂದ ಮಂಗಳೂರು ನಗರವನ್ನು ಇನ್ನಷ್ಟು ಸುಂದರ ಹಾಗೂ ಆರೋಗ್ಯಕರವಾಗಿಸಲು ಸಾಧ್ಯವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಹಾಗೂ ಭಾಗವಹಿಸುವ ಇಚ್ಛೆಯಿರುವವರು 7019218898 ಅಥವಾ 8105356290 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


