ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮುಖ್ಯ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಸಹಾಯಕ ಕಾರ್ಯ ನಿರ್ವಹಣಾಧಿಕಾರಿಯವರಾದ ವೆಂಕಟ್ರಮಣ ರಾವ್ ಆಗಮಿಸಿ ಪಂಚ ಪರಿವರ್ತನೆಗಳಾದ ಕುಟುಂಬ ಪ್ರಬೋಧನ, ಸಾಮರಸ್ಯ, ಪರ್ಯಾವರಣ, ಸ್ವದೇಶಿ ವಸ್ತುಗಳ ಉಪಯೋಗ, ನಾಗರಿಕ ಶಿಷ್ಟಾಚಾರವನ್ನು ವಿದ್ಯಾರ್ಥಿಗಳು ಮೈಗೂಡಿಸುವ ಮೂಲಕ ದೇಶದ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು. ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಗೀತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸರ್ವರನ್ನೂ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ದೀಪವನ್ನು ನೀಡುವುದರ ಮೂಲಕ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅನನ್ಯಾ ಕಾರ್ಯಕ್ರಮವನ್ನು ನಿರೂಪಿಸಿ, ಧನುಷ್ ಧನ್ಯವಾದಗೈದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


