ವಿದ್ಯಾದಾಯಿನೀ ಪ್ರೌಢಶಾಲೆಯಲ್ಲಿ ರಾಷ್ಟೀಯ ವಿಜ್ಞಾನ ದಿನಾಚರಣೆ

Upayuktha
0


ಸುರತ್ಕಲ್‌: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಅನುದಾನಿತ ವಿದ್ಯಾದಾಯಿನೀ ಪ್ರೌಢಶಾಲೆಯಲ್ಲಿ ರಾಷ್ಟೀಯ ವಿಜ್ಞಾನ ದಿನಾಚರಣೆ  ಇಂದು (ಫೆ.28) ಹಿಂದು ವಿದ್ಯಾದಾಯಿನೀ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಶಾಲಾ ಸಂಚಾಲಕರಾದ ಸುಧಾಕರ ರಾವ್ ಪೇಜಾವರ್ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.


ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯೋಗೀಶ್, ನಿರ್ದೇಶಕರು ಮಾಹಿತಿ ತಂತ್ರಜ್ಞಾನ, M B O cinema Sdn. Bhd ಆಗಮಿಸಿ ವಿದ್ಯಾರ್ಥಿಗಳಿಗೆ ರಾಮನ್ ಪರಿಣಾಮದ ಅನ್ವಯ ಹಾಗೂ ಕೃತಕ ಬುದ್ಧಿಮತ್ತೆಯ ಬಗ್ಗೆ ತಿಳಿಸಿದರು. ಶಾಲಾ ವಿದ್ಯಾರ್ಥಿಗಳು ಭಾಷಣ ಹಾಗೂ ವಿವಿಧ ಪ್ರಯೋಗಗಳನ್ನು ಮಾಡಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಪ್ರತಿಜ್ಞೆಯನ್ನು ಕೈಗೊಂಡರು.


ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಶ್ರೀ ದೇವಪ್ಪ ವಸಂತ ಕುಮಾರ್ ನಾಯ್ಕ ಎಲ್ಲರನ್ನು ಸ್ವಾಗತಿಸಿದರು. ಅಧ್ಯಕ್ಷರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ನಮ್ಮ ದೈನಂದಿನ ಜೀವನದ ಕ್ಷಣ ಕ್ಸಣದಲ್ಲೂ ವಿಜ್ಞಾನ ಅಡಗಿದೆ ಎಂದು ತಿಳಿಸಿದರು. ವಿಜ್ಞಾನ ಸಂಘದ ನಿರ್ವಾಹಕರಾದ ಶ್ರೀಮತಿ ಶೋಭಾ ಧನ್ಯವಾದಗೈದರು. ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top