ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ

Upayuktha
0

‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಯಶಸ್ವಿ ಆಯೋಜನೆ





ಮಂಗಳೂರು: ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಎಂಬ ಕಾರ್ಯಕ್ರಮವನ್ನು ಮಂಗಳವಾರ ಮಧ್ಯಾಹ್ನ 2.00 ಗಂಟೆಗೆ ಪಳ್ನೀರು, ಮಂಗಳೂರು ಇಲ್ಲಿನ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.


ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಅವರು ಅತಿಥಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜಾ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾದ ಶ್ರೀ ಉಮೇಶ್ ರಾವ್ ಕುಂಬಳೆ ಅವರು ಪ್ರಸ್ತಾವನೆ ನುಡಿಗಳನ್ನಾಡಿ, ಶಾಲಾ ಹಂತದಲ್ಲೇ ಕನ್ನಡ ಭಾಷೆ ಹಾಗೂ ಸಾಹಿತ್ಯದ ಪರಿಚಯವು ವಿದ್ಯಾರ್ಥಿಗಳಲ್ಲಿ ಭಾಷಾ ಅರಿವು ಮತ್ತು ಸಾಂಸ್ಕೃತಿಕ ಬೇರೂರಿಕೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.


ಕನ್ನಡ ಭವನ ಹಾಗೂ ಗ್ರಂಥಾಲಯ, ಕಾಸರಗೋಡು ಇದರ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಅವರು ಮುಖ್ಯ ಭಾಷಣ ಮಾಡಿದರು. ಕನ್ನಡ ಸಾಹಿತ್ಯದ ಶ್ರೀಮಂತ ಪರಂಪರೆ, ಅದರ ಸಾಮಾಜಿಕ ಹೊಣೆಗಾರಿಕೆ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಭಾಷೆಯ ಪಾತ್ರದ ಬಗ್ಗೆ ಅವರು ಬೆಳಕು ಚೆಲ್ಲಿದರು. ಕನ್ನಡದ ಮೇಲಿನ ಪ್ರೀತಿ ಮತ್ತು ಆಸಕ್ತಿಯನ್ನು ಬಾಲ್ಯದಲ್ಲೇ ಬೆಳೆಸಿಕೊಳ್ಳುವಂತೆ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ಕನ್ನಡ ಭವನ ಕಾಸರಗೋಡು ಇದರ ಸಂಚಾಲಕರೂ ಹಾಗೂ ಸ್ಥಾಪಕರೂ ಆದ ಶ್ರೀಮತಿ ಸಂಧ್ಯಾ ರಾಣಿ ಟೀಚರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಲವೀನ ಅನಿಟ ಡಿಸೋಜಾ ಅವರು ಕಾರ್ಯಕ್ರಮವನ್ನು ಸುಸೂತ್ರವಾಗಿ ನಿರೂಪಿಸಿದರು.


ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕವನ ವಾಚನ ಹಾಗೂ ರಸಪ್ರಶ್ನಾ ಸ್ಪರ್ಧೆಗಳಲ್ಲಿ ಸುಮಾರು 35 ವಿದ್ಯಾರ್ಥಿಗಳು ಭಾಗವಹಿಸಿದರು. ಕವನ ವಾಚನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜಾ ಹಾಗೂ ಶಿಕ್ಷಕಿ ಲವೀನ ಅನಿಟ ಡಿಸೋಜಾ ಅವರನ್ನು ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಗೌರವಿಸಲಾಯಿತು.


ಶಿಕ್ಷಕಿ ಶ್ರೀಮತಿ ಶ್ರೀಲಕ್ಷ್ಮಿ ಕೀಕಾನ ಅವರು ವಂದಿಸಿದರು. ಅಧ್ಯಕ್ಷೆ ಶ್ರೀಮತಿ ರೇಖಾ ಸುದೇಶ್ ರಾವ್ ಅವರು ಧನ್ಯವಾದ ಅರ್ಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top