ಉಡುಪಿ: ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯದ ಸ್ಥಾಪಕ ಕುಲಾಧಿಪತಿಗಳೂ, ಶ್ರೀನಿವಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರೂ, ಖ್ಯಾತ ಲೆಕ್ಕಪರಿಶೋಧಕರೂ ಆಗಿದ್ದ ರಾಘವೇಂದ್ರ ರಾವ್ ಅವರ ನಿಧನಕ್ಕೆ ಪುತ್ತಿಗೆ ಮಠದ ಪೀಠಾಧಿಪತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅವರು ಆಳವಾದ ಸಂತಾಪ ಸೂಚಿಸಿದ್ದಾರೆ.
ಸಾತ್ವಿಕ ಸ್ವಭಾವದವರಾಗಿದ್ದ ಹಾಗೂ ಉದಾರ ದಾನಿಗಳಾಗಿದ್ದ ರಾಘವೇಂದ್ರ ರಾವ್ ಅವರು ಪುತ್ತಿಗೆ ಮಠದ ಆಪ್ತ ಅಭಿಮಾನಿಯಾಗಿದ್ದು, ಮಠದ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಹತ್ವದ ಕೊಡುಗೆ ನೀಡಿದ್ದರು. ಅಲ್ಲದೆ ಶ್ರೀಕೃಷ್ಣ ಮಠದ ಅಭಿವೃದ್ಧಿಗೂ ಅವರು ಸದಾ ಸಹಕಾರ ನೀಡಿದವರು.
ಪುತ್ತಿಗೆ ಮಠದ ಚತುರ್ಥ ವಿಶ್ವ ಗೀತಾ ಪರ್ಯಾಯ ಸಂದರ್ಭದಲ್ಲಿ ರಾಘವೇಂದ್ರ ರಾವ್ ಅವರನ್ನು ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅವರ ನಿಧನವು ಧಾರ್ಮಿಕ ಹಾಗೂ ಶೈಕ್ಷಣಿಕ ವಲಯಕ್ಕೆ ಅಪಾರ ನಷ್ಟವಾಗಿದೆ ಎಂದು ಪುತ್ತಿಗೆಶ್ರೀಗಳು ತಿಳಿಸಿದ್ದಾರೆ.
ಮಠದ ನಿಷ್ಠಾವಂತ ಅಭಿಮಾನಿಯಾಗಿದ್ದ ರಾಘವೇಂದ್ರ ರಾವ್ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲೆಂದು ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

