ಪುತ್ತೂರು ನ್ಯಾಯಾಲಯ ಸಂಕೀರ್ಣ ಉದ್ಘಾಟನೆ ಹಿನ್ನೆಲೆ ಕ್ಯಾಂಪ್ಕೋ ಚಾಕೊಲೇಟ್‌ಗಳ ವಿತರಣೆ

Upayuktha
0


ಪುತ್ತೂರು: ಪುತ್ತೂರು ತಾಲ್ಲೂಕಿನ ಬನ್ನೂರು ಅನೇಮಜಲು ಪ್ರದೇಶದಲ್ಲಿ ನವ ನಿರ್ಮಿತ ನ್ಯಾಯಾಲಯ ಸಂಕೀರ್ಣದ ಉದ್ಘಾಟನೆ ಹಿನ್ನೆಲೆಯಲ್ಲಿ ಕ್ಯಾಂಪ್ಯೋ  ಸಂಸ್ಥೆಯ ನಿರ್ದೇಶಕರಾದ ಹಾಗೂ ಹಿರಿಯ ವಕೀಲರಾದ ಮುರಳಿ ಕೃಷ್ಣ ಕೆ.ಎನ್. ಅವರು ಗಣ್ಯ ನ್ಯಾಯಮೂರ್ತಿಗಳಿಗೆ ಕ್ಯಾಂಪ್ಕೋ ಚಾಕೊಲೇಟ್‌ಗಳನ್ನು ಪ್ರದಾನಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹಾಗೂ ರಾಜ್ಯಪಾಲರಾದ ಗೌರವಾನ್ವಿತ ಅಬ್ದುಲ್ ನಜೀರ್, ಸೇರಿದಂತೆ ಹೈಕೋರ್ಟ್ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿಗಳು ಉಪಸ್ಥಿತರಿದ್ದರು.


ಕ್ಯಾಂಪ್ಕೋ ನಿರ್ದೇಶಕ ಮುರಳಿ ಕೃಷ್ಣ ಅವರು, ಸಂಸ್ಥೆಯ ಕಾರ್ಯಚಟುವಟಿಕೆಗಳು, ಕೋಕೋ ಬೆಳೆಗಾರರ ಹಿತಾಸಕ್ತಿ, ಮೌಲ್ಯವರ್ಧಿತ ಉತ್ಪನ್ನಗಳು ಹಾಗೂ ಗ್ರಾಮೀಣ ಆರ್ಥಿಕತೆಗೆ ನೀಡುತ್ತಿರುವ ಕೊಡುಗೆಗಳ ಕುರಿತು ನ್ಯಾಯಮೂರ್ತಿಗಳಿಗೆ ವಿವರಿಸಿದರು.


ನ್ಯಾಯಮೂರ್ತಿಗಳು ಪುತ್ತೂರಿನಂತಹ ನಗರ ಪ್ರದೇಶದಲ್ಲಿ ಕ್ಯಾಂಪ್ಕೋ ಸಂಸ್ಥೆ ಸ್ಥಾಪನೆಯಾಗಿರುವುದು ಅತ್ಯಂತ ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ರೈತರ ಶಕ್ತೀಕರಣ, ಸಹಕಾರ ಚಳವಳಿ ಹಾಗೂ ಉದ್ಯೋಗ ಸೃಷ್ಟಿಗೆ ಸಂಸ್ಥೆ ನೀಡುತ್ತಿರುವ ಕೊಡುಗೆಗಳನ್ನು ಪ್ರಶಂಸಿಸಿ, ಕ್ಯಾಂಪ್ಕೋ ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭಾಶಯ ಕೋರಿದರು.


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top