ನೀರ್ಚಾಲು: ಪೆರ್ಲದಲ್ಲಿ ಪುತ್ರನೊಂದಿಗೆ ವಾಸವಾಗಿದ್ದ ನೀರ್ಚಾಲಿನ ಹಿರಿಯ ಶಿಕ್ಷಕ, ಭಾಷಾ ಪಂಡಿತ ವಾಶೆಮನೆ ಮಹಾಲಿಂಗ ಭಟ್ (84) ಅವರು ತಾ. 23-02-2026ರ ಪ್ರಾತಃಕಾಲ ನಿಧನರಾದರು.
ಇವರು ನೀರ್ಚಾಲಿನ ಮಹಾಜನ ಸಂಸ್ಕೃತ ಕಾಲೇಜು ಹೈಸ್ಕೂಲು (ಪ್ರಕೃತ MSCHSS) ಹೈಸ್ಕೂಲು ವಿಭಾಗದಲ್ಲಿ ಕನ್ನಡ ಅಧ್ಯಾಪಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿ ಸಹಸ್ರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ್ದರು. ಕನ್ನಡ, ಸಂಸ್ಕೃತ ಹಾಗೂ ಹಿಂದಿ ಭಾಷೆಗಳಲ್ಲಿ ಎಂ.ಎ. ಪದವೀಧರರಾಗಿದ್ದ ಇವರು ಈ ಮೂರೂ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಶಿಕ್ಷಕರಾಗಿದ್ದರು.
ನಿವೃತ್ತಿಯ ನಂತರ ಮುಜಂಗಾವಿನ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿ, ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕನ್ನು ನೀಡಿದರು. ಇವರ ನಿಧನವು ಭಾಷಾ-ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವೆಂದು ವಿದ್ಯಾಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಯಕ್ಷಗಾನ ತಾಳಮದ್ದಳೆ ಅರ್ಥಧಾರಿಗಳಾಗಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಇವರು, ಸರಳತೆ, ಸಜ್ಜನಿಕೆ ಹಾಗೂ ಸಮಾಜಮುಖಿ ಚಿಂತನೆಗಳಿಂದ ಆದರ್ಶಪ್ರಾಯ ಜೀವನ ನಡೆಸಿದವರಾಗಿ ಪರಿಚಿತರಾಗಿದ್ದರು. ನಿವೃತ್ತಿಯ ನಂತರ ನಿವೃತ್ತ ಶಿಕ್ಷಕರ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸದಸ್ಯರ ಏಳಿಗೆಗಾಗಿ ಶ್ಲಾಘನೀಯ ಸೇವೆ ಸಲ್ಲಿಸಿದ್ದರು.
ಅವರ ನಿಧನಕ್ಕೆ ಶಿಕ್ಷಣ, ಸಾಹಿತ್ಯ ಹಾಗೂ ಸಾಂಸ್ಕೃತಿಕ ವಲಯದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


