ಎಸ್‌ಸಿಎಸ್‌ ಪ್ರಥಮ ದರ್ಜೆ ಕಾಲೇಜು ಎನ್ನೆಸ್ಸೆಸ್‌ ವಾರ್ಷಿಕ ಶಿಬಿರ ಉದ್ಘಾಟನೆ

Upayuktha
0


ಮಂಗಳೂರು: ಎಸ್ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು "ನನ್ನ ಭಾರತಕ್ಕಾಗಿ ಯುವ ಜನತೆ- ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ" ಎಂಬ ಘೋಷ ವಾಕ್ಯದೊಂದಿಗೆ ಮಂಗಳವಾರ (ಫೆ.10) ಉದ್ಘಾಟಿಸಲಾಯಿತು. ಶಿಬಿರದ ವಿದ್ಯಾರ್ಥಿಗಳು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ರತ್ನಾಕರ ಮಲ್ಲಮೂಲೆ ಕಾರ್ಯಕ್ರಮವನ್ನು ಉದ್ಘಾಟಿಸಿ ಯುವ ಜನತೆ ಡಿಜಿಟಲ್ ಜ್ಞಾನವನ್ನು ಪಡೆದು ಗ್ರಾಮೀಣ ಭಾಗಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.


ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಅಳವಡಿಸಿಕೊಳ್ಳಬೇಕು, ತಮ್ಮಲ್ಲಿರುವ ಕೌಶಲ್ಯ, ಪರಿಸರ ಪ್ರೇಮ, ಪ್ರಕೃತಿ ಕಾಳಜಿ,ನಾಯಕತ್ವ ಗುಣ, ಸಹಕರಿಸುವ ಗುಣ ಇವುಗಳಿಂದ ಸರ್ವತೋಮುಖ ಅಭಿವೃದ್ಧಿಯನ್ನು ಕಾಣಬೇಕು ಎಂದು ಶಿಬಿರಾರ್ಥಿಗಳಿಗೆ ತಿಳಿಸಿದರು. 


ನಿಮ್ಮಂತಹ ಯುವ ಪೀಳಿಗೆಗಳು ಸತ್ತ ಮೇಲೆ ಬದುಕುವ ಪ್ರಯತ್ನ ಮಾಡಬೇಕು ಎಂದು ಮಹಾತ್ಮ ಗಾಂಧೀಜಿ, ವಿವೇಕಾನಂದ, ಅಬ್ದುಲ್ ಕಲಾಂ, ಅರಿಸ್ಟಾಟಲ್ ಮುಂತಾದ ಮಹನೀಯರ ಇತಿಹಾಸವನ್ನು ತಿಳಿಸುವುದರ ಮುಖಾಂತರ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್‌ಸಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಯು.ಕೆ ಖಾಲಿದ್ ಅವರು ವಿದ್ಯಾರ್ಥಿಗಳನ್ನು ಕುರಿತು ಎನ್‌.ಎಸ್.ಎಸ್ ಚಟುವಟಿಕೆಗಳು, ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು.


ಇಂತಹ ಶಿಬಿರಗಳಲ್ಲಿ ಭಾಗಿಯಾಗುವುದರ ಮುಖಾಂತರ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ, ಸಾಮಾಜಿಕ ಬದ್ಧತೆ, ಶಿಸ್ತು ಸಮಯ ಪ್ರಜ್ಞೆ ಹಾಗೂ ಸಮನ್ವಯ ಸಾಮರ್ಥ್ಯವನ್ನು ವೃದ್ಧಿಸುತ್ತವೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ್ದ ಶ್ರೀ ಗಣೇಶ್ ನಾಯಕ್ ಸಂಚಾಲಕರು ಶ್ರೀ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುರ್ನಾಡು, ಮುಡಿಪು ಅವರು ಶಿಬಿರಾರ್ಥಿಗಳು ಗ್ರಾಮೀಣ ಶಿಕ್ಷಣ ಮತ್ತು ಸಾಮಾಜಿಕ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು ಹಾಗೆ ಸಮಾಜದ ಸಮಸ್ಯೆಗಳನ್ನು ಅರಿತು ಅವುಗಳಿಗೆ ಪರಿಹಾರ ಕಂಡು ಹಿಡಿಯುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.


ಇನ್ನೋರ್ವ ಅಭ್ಯಾಗತರಾದ ಮೆಸ್ಕಾಂ ಬಂಟ್ವಾಳದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾರಾಯಣ ಭಟ್ ಅವರು ಡಿಜಿಟಲ್ ಸಾಕ್ಷರತೆಯ ಅಗತ್ಯತೆಯನ್ನು ಒತ್ತಿ ಹೇಳಿ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.


ಮತ್ತೋರ್ವ ಅಭ್ಯಾಗತರಾದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಮಾಜಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಅವರು ಮಾತನಾಡಿ, ಶಿಬಿರಾರ್ಥಿಗಳನ್ನು ಕುರಿತು ಶಿಸ್ತು, ಸಮಯ ಪಾಲನೆ ಮತ್ತು ಒಗ್ಗಟ್ಟು ಇಂತಹ ಗುಣಗಳು ಎನ್.ಎಸ್.ಎಸ್ ಮೂಲಕ ಬೆಳೆಸಿಕೊಳ್ಳಬಹುದಾದ ಮೌಲ್ಯಗಳಾಗಿವೆ, ಇವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಹಾರ್ದಿಕ್ ಪಿ ಚೌಹಾನ್, ಮುಡಿಪು ಗ್ರಾಮ ಪಂಚಾಯತ್ ಅಧ್ಯಕ್ಷೆ  ಶ್ರೀಮತಿ ಪ್ರೇಮಾ ಗಟ್ಟಿ, ಕುರ್ನಾಡು ಮುಡಿಪು ಶ್ರೀ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಸಂತಿ ಪಿ  ಇವರು ಉಪಸ್ಥಿತರಿದ್ದರು.


ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಅಶ್ವಿನಿ ಶೆಟ್ಟಿ ಸ್ವಾಗತಿಸಿದರು. ವಿಶ್ವಾತ್ಮಿಕ ಪ್ರಾಸ್ತಾವಿಕ ಭಾಷಣ ಮಾಡಿದರು. ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿ ತುಷಾರ್ ವಂದಿಸಿದರು.  ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿ ರಿಷಲ್ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top