ರೋಮನ್ ಮತ್ತು ಕ್ಯಾಥರಿನ್ ಲೋಬೊ ಶಾಲೆಯಲ್ಲಿ ವಿಜ್ಞಾನ ಮೇಳ
ಮಂಗಳೂರು: ಸೇವಾ ಭಾರತಿ (ರಿ) ಮಂಗಳೂರು ಇದರ ಅಂಗಸಂಸ್ಥೆಯಾದ ರೋಮನ್ ಮತ್ತು ಕ್ಯಾಥರಿನ್ ಲೋಬೊ ದೃಷ್ಟಿ ಮಾಂದ್ಯ ಮಕ್ಕಳ ವಸತಿಯುತ ಶಾಲೆಯಲ್ಲಿ ಶುಕ್ರವಾರ (ಫೆ.20) ವಿಜ್ಞಾನ ಮೇಳವನ್ನು ಆಯೋಜಿಸಲಾಯಿತು. ಬೆಂಗಳೂರು ಮೂಲದ ವಿಷನ್ ಎಂಪವರ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಈ ಮೇಳದಲ್ಲಿ ದೃಷ್ಟಿರಹಿತ ವಿದ್ಯಾರ್ಥಿಗಳು ವಿಜ್ಞಾನಕ್ಕೆ ಸಂಬಂಧಿಸಿದ ವಿವಿಧ ನವೀನ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟ್ಹಿನಾ ಅವರು ದೀಪ ಬೆಳಗುವ ಮೂಲಕ ವಿಜ್ಞಾನ ಮೇಳವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ದೃಷ್ಟಿ ಮಾಂದ್ಯ ಮಕ್ಕಳಲ್ಲಿರುವ ವಿಶೇಷ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಪ್ರಶಂಸಿಸಿ, ಇಂತಹ ವಿಜ್ಞಾನಾಧಾರಿತ ಕಾರ್ಯಕ್ರಮಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ವ್ಯಾಪಕವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.
ಸೇವಾ ಭಾರತಿ ಸಂಸ್ಥೆಯ ವಿಶ್ವಸ್ಥರಾದ ಗಜಾನನ ಪೈ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು. ವೇದಿಕೆಯಲ್ಲಿ ಖ್ಯಾತ ದೃಶ್ಯ ಮಾಧ್ಯಮ ನಿರೂಪಕರಾದ ಸುಮತಿ ಉಪಸ್ಥಿತರಿದ್ದರು. ಶಿಕ್ಷಕ ರಘುರಾಮ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು, ಸ್ವಯಂಸೇವಕರು ಹಾಗೂ ಹಿತೈಷಿಗಳು ಭಾಗವಹಿಸಿದ್ದರು. ವಿಜ್ಞಾನ ಮೇಳದ ವೀಕ್ಷಣೆಗೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಆಗಮಿಸಿದ್ದು, ಪ್ರದರ್ಶನವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

