ನಾಳೆ ವಿಸಿಇಟಿಯಲ್ಲಿ ವಿಕಸಿತ ಭಾರತ ವಿಚಾರಗೋಷ್ಟಿ

Upayuktha
0


ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಶ್ರಯದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನದ ಪರಿಕಲ್ಪನೆ ವಿಕಸಿತ ಭಾರತ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಯುವಜನರ ಪಾಲ್ಗೊಳ್ಳುವಿಕೆ ಈ ವಿಷಯದ ಬಗ್ಗೆ ವಿಚಾರಗೋಷ್ಟಿಯೊಂದನ್ನು ಏರ್ಪಡಿಸಲಾಗಿದೆ.


ಫೆಬ್ರವರಿ 7 2026 ಶನಿವಾರ ಮಧ್ಯಾಹ್ನ 12 ಗಂಟೆಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ಈ ಕಾರ್ಯಕ್ರಮವು ನಡೆಯಲಿದೆ. ನವದೆಹಲಿ ಲೋಕಸಭಾ ಕ್ಷೇತ್ರದ ಸಂಸದೆ ಬಾನ್ಸುರಿ ಸ್ವರಾಜ್ ಈ ಕಾರ್ಯಕ್ರಮದಲ್ಲಿ ತಮ್ಮ ವಿಚಾರಧಾರೆಗಳನ್ನು ಹಂಚಿಕೊಳ್ಳಲಿದ್ದಾರೆ. ಇವರು ವೃತ್ತಿಯಲ್ಲಿ ಹೆಸರಾಂತ ವಕೀಲೆಯಾಗಿದ್ದು, ಕೇಂದ್ರ ಸರ್ಕಾರದ ಪೂರ್ವ ಮಂತ್ರಿಯಾಗಿದ್ದ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ.


ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತಮ್ಮ ಅಮೂಲ್ಯ ಕೊಡುಗೆಯನ್ನು ನೀಡುವಂತೆ ಅವರನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಈ ವಿಚಾರಗೋಷ್ಟಿಯನ್ನು ಏರ್ಪಡಿಸಲಾಗುತ್ತಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top