ಹಿರಿಯ ರಾಜಕೀಯ ಮುತ್ಸದ್ದಿ ಬಿ. ಅಪ್ಪಣ್ಣ ಹೆಗ್ಡೆ ನಿಧನ: ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha
0


ಬೈಂದೂರು: ಬೈಂದೂರಿನ ಹಿರಿಯ ರಾಜಕೀಯ ಧುರಿತರು ಹಾಗೂ ಮಾಜಿ ಶಾಸಕರಾದ ಶ್ರೀ ಬಿ. ಅಪ್ಪಣ್ಣ ಹೆಗ್ಡೆ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.


ತಮ್ಮ ಸರಳ ಜೀವನ ಹಾಗೂ ಉನ್ನತ ಚಿಂತನೆಯೊಂದಿಗೆ ಧಾರ್ಮಿಕ, ಶಿಕ್ಷಣ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ  ಅವರು ಅನುಪಮ ಸೇವೆ ಮಾಡಿ ಜನಪ್ರಿಯರಾಗಿದ್ದರು. ಸಮಾಜದಲ್ಲಿ ಯಾವುದೇ ಸಮಸ್ಯೆಗಳು ಉಂಟಾದಾಗ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಪರಿಹರಿಸುವ ಚಾಕಚಕ್ಯತೆ ಅವರಲ್ಲಿತ್ತು.


ಧರ್ಮಸ್ಥಳದ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ನಮ್ಮ ಎಲ್ಲಾ ಕಾರ್ಯಕ್ರಮಗಳಿಗೆ ಸಕ್ರಿಯ ಸಹಕಾರ ನೀಡುತ್ತಿದ್ದರು. ಆ ಭಾಗದಲ್ಲಿ  ನಮ್ಮ ಯಾವುದೇ ಯೋಜನೆ ಹಾಗೂ ಕಾರ್ಯಕ್ರಮವನ್ನು ಸಂಘಟಿಸಿ ಯಶಸ್ವಿಗೊಳಿಸುವಲ್ಲಿ ಅವರು ನೇತೃತ್ವ ವಹಿಸಿ ಬೆಂಬಲಿಸುತ್ತಿದ್ದರು. ವಿಶೇಷವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆಯ ಚಟುವಟಿಕೆಗಳಿಗೆ ಉತ್ತಮ ಸಹಕಾರ ನೀಡಿ ಪ್ರೋತ್ಸಾಹಿಸಿದ್ದಾರೆ.


ಗ್ರಾಮ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ, ಶಾಸಕರಾಗಿ ಅವರು ಉತ್ತಮ ಸೇವೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು ಎಂದು ಡಾ. ಹೆಗ್ಗಡೆಯವರು ಸ್ಮರಿಸಿದ್ದಾರೆ.


ಅವರ ಅಗಲುವಿಕೆಯಿಂದ ಕರಾವಳಿ ಭಾಗದ ಶಕ್ತಿಯುತ ಕೊಂಡಿಯೊಂದು ಕಳಚಿದಂತಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಶ್ರೀ ಮಂಜುನಾಥಸ್ವಾಮಿಯಲ್ಲಿ ಪ್ರಾರ್ಥಿಸುತ್ತೇನೆ" ಎಂದು ಡಾ. ವೀರೇಂದ್ರ ಹೆಗ್ಗಡೆಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top