ಫೆ.16: ಸಿನಿಮಾಗಳ ಮೂಲಕ ಶಿವರಾಮ ಕಾರಂತರು- ವಿಶೇಷ ಕಾರ್ಯಕ್ರಮ

Upayuktha
0


ಮಣಿಪಾಲ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತಟ್ರಸ್ಟ್ ಮಾಹೆಯ ಮಣಿಪಾಲ್ ಇನ್‍ಸ್ಟಿಟ್ಯೂಟ್ ಆಫ್ ಸೋಶಿಯಲ್ ಸಾಯನ್ಸಸ್, ಹ್ಯುಮಾನಿಟೀಸ್ ಮತ್ತುಆಟ್ರ್ಸ್ [ಮಿಶ]ಮತ್ತು  ಭಾಷಾ ವಿಭಾಗ, ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಕೇಂದ್ರ ಮಣಿಪಾಲ ಇವರ ಸಹಯೋಗದಲ್ಲಿ ದಿನಾಂಕ 16-02-2026 ರಂದು ಮಣಿಪಾಲದ ಮಾಹೆಯಲ್ಲಿ ಪೂರ್ಣ ದಿನದ ‘ಸಿನೆಮಾಗಳ ಮೂಲಕ ಶಿವರಾಮ ಕಾರಂತರು’ ಕಾರ್ಯಕ್ರಮವು ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ‘ಚೋಮನ ದುಡಿ’ ಚಲನಚಿತ್ರದ ಪ್ರದರ್ಶನವಿದೆ. 


ಪ್ರಸಿದ್ಧ ಸಿನೆಮಾ ನಿರ್ದೇಶಕಗಿರೀಶ ಕಾಸರವಳ್ಳಿಯವರು ಸಂವಾದದಲ್ಲಿ ಭಾಗವಹಿಸುತ್ತಾರೆ. ಮಧ್ಯಾಹ್ನ 1.30 ಗಂಟೆಗೆ ‘ಮೂಕಜ್ಜಿಯ ಕನಸುಗಳು’ ಚಿತ್ರದ ಪ್ರದರ್ಶನವಿದೆ. ಮೂಕಜ್ಜಿಯ ಕನಸುಗಳು‘ ಮತ್ತು ‘ಚೋಮನದುಡಿ’ ಚಲನ ಚಿತ್ರಗಳಿಗೆ ಸಂಬಂಧಿಸಿ ಸಂವಾದದಲ್ಲಿ ಪ್ರಸಿದ್ಧ ಸಿನೆಮಾ ನಿರ್ದೇಶಕ ಪಿ. ಶೇಷಾದ್ರಿ ಭಾಗವಹಿಸುತ್ತಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ. ಆಸಕ್ತ ವಿದ್ಯಾರ್ಥಿಗಳು ಹೆಸರು ನೋಂದಾಯಿಸಲು ದೂ: 6362517472 ಅನ್ನು ಸಂಪರ್ಕಿಸಬಹುದಾಗಿದೆಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ. 


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top