ಉಜಿರೆ: ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ಧಾರಿ ಖ್ಯಾತ ಬ್ಯೂಟೀಶಿಯನ್ ಶ್ರೀಮತಿ ಉಮಾ ಜಯಕುಮಾರ್ (ವನ್ ಮಿನಿಟ್ ಉಮಾ) ಇವರಿಂದ ಒಂದು ದಿನದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮವನ್ನು ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಎನ್. ಜನಾರ್ದನ್ ಅವರು ಉದ್ಘಾಟಿಸಿ, ಕೌಶಲ್ಯಾಧಾರಿತ ತರಬೇತಿಗಳು ಸ್ವ ಉದ್ಯೋಗಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀಮತಿ ಉಮಾ ಜಯಕುಮಾರ್ ಅವರು ಬ್ಯೂಟೀಶಿಯನ್ ವೃತ್ತಿಯಲ್ಲಿ ತಾಂತ್ರಿಕ ನೈಪುಣ್ಯ, ಸಮಯ ನಿರ್ವಹಣೆ ಹಾಗೂ ಗ್ರಾಹಕ ತೃಪ್ತಿಯ ಮಹತ್ವದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯಕುಮಾರ್ ವಹಿಸಿ ಮಾತನಾಡಿ, ಗ್ರಾಮೀಣ ಯುವಜನತೆಗೆ ಕೌಶಲ್ಯ ತರಬೇತಿ ನೀಡುವಲ್ಲಿ ರುಡ್ ಸೆಟ್ ಸಂಸ್ಥೆಯ ಪಾತ್ರವನ್ನು ವಿವರಿಸಿದರು.
ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಸ್ವಾಗತಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಅವರು ಮಾಡಿದರು.
ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಅವರು ಧನ್ಯವಾದ ಸಮರ್ಪಿಸಿದರು. ಪ್ರಾರ್ಥನೆಯನ್ನು ಶ್ರೀಮತಿ ಸೀತಾ ಹೆಗಡೆ ಹಾಗೂ ಶ್ರೀಮತಿ ಲಕ್ಷ್ಮಿ ಅವರು ಸಲ್ಲಿಸಿದರು. ವೇದಿಕೆಯಲ್ಲಿ ಅತಿಥಿ ಉಪನ್ಯಾಸಕಿಯಾದ ಶ್ರೀಮತಿ ಮಾಧವಿ ರೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಯ ಕೇಂದ್ರ ಕಚೇರಿಯ ಹಿರಿಯ ಉಪನ್ಯಾಸಕಿ ಶ್ರೀಮತಿ ಅನಸೂಯಾ, ಉಪನ್ಯಾಸಕ ಲೋಹಿತ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ರುಡ್ ಸೆಟ್ ಸಂಸ್ಥೆಯ ಬ್ಯೂಟೀಶಿಯನ್ ತರಬೇತಿ ಪಡೆದ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


