ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯಮಶೀಲತೆ ಮತ್ತು ನಾವೀನ್ಯತೆ ಕುರಿತ ಕಾರ್ಯಾಗಾರ

Upayuktha
0


ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಇದರ ಮಾನವಿಕ ವಿಜ್ಞಾನ ವಿಭಾಗವು ಇನೊವೇಶನ್ ಹಬ್, ಸೆಂಟರ್ ಫಾರ್ ಇನೊವೇಶನ್ ಅಂಡ್ ಎಂಟ್ರಪ್ರಿನ್ಯುರ್‌ಶಿಪ್ (CIE) ಹಾಗೂ ನ್ಯೂ ಏಜ್ ಇಂಕ್ಯುಬೇಶನ್ ನೆಟ್‌ವರ್ಕ್ ಸಹಯೋಗದಲ್ಲಿ “ಉದ್ಯಮಶೀಲತೆ ಮತ್ತು ನಾವೀನ್ಯತೆ: ವೃತ್ತಿಪಥವಾಗಿ ಸಾಮಾಜಿಕ ಉದ್ಯಮಶೀಲತೆ” ವಿಷಯದ ಕುರಿತ ಕಾರ್ಯಾಗಾರವನ್ನು ಪಿಜಿ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿತು.


ಕಾರ್ಯಕ್ರಮದಲ್ಲಿ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಗೋಲೆಕ್ಸ್ ಇಂಡಸ್ಟ್ರೀಸ್, ಪುತ್ತೂರು ಸಂಸ್ಥೆಯ ಮಾಲೀಕರಾದ ಶ್ರೀ ಕೃಷ್ಣ ಮೋಹನ್ ಪಿ.ಎಸ್. ಅವರು, ವಿದ್ಯಾರ್ಥಿಗಳು ಉದ್ಯೋಗ ಅರಸುವವರಾಗದೆ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಡಾ. ವಿಜಯಕುಮಾರ್ ಎಂ. ಅವರು, ವಿದ್ಯಾರ್ಥಿಗಳಲ್ಲಿ ಉದ್ಯಮಶೀಲ ಮನೋಭಾವ ಬೆಳೆಸುವುದು ಅತ್ಯವಶ್ಯಕ ಎಂದರು.


ಕಾರ್ಯಕ್ರಮದಲ್ಲಿ ಮಾನವಿಕ ವಿಜ್ಞಾನ ವಿಭಾಗದ ಉಪನ್ಯಾಸಕರು ಹಾಜರಿದ್ದರು. ದ್ವಿತೀಯ ಬಿ.ಎ. ವಿದ್ಯಾರ್ಥಿನಿ ವೈಷ್ಣವಿ ಮತ್ತು ತಂಡದ ಪ್ರಾರ್ಥನೆ, ಮಾನವಿಕ ವಿಜ್ಞಾನ ವಿಭಾಗದ ಡೀನ್ ಡಾ. ನಾರ್ಬರ್ಟ್ ಮಸ್ಕರೇನ್ಹಾಸ್ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಕಾರ್ಯಕ್ರಮ ಸಂಚಾಲಕರಾದ ಕ್ಯಾಪ್ಟನ್ ಜಾನ್ಸನ್ ಡೇವಿಡ್ ಸಿಕ್ವೇರಾ ವಂದನಾರ್ಪಣೆ ಸಲ್ಲಿಸಿ, ಪ್ರಥಮ ಬಿ.ಎ. ವಿದ್ಯಾರ್ಥಿನಿ ಸೃಷ್ಟಿ ಶೆಣೈ ಕಾರ್ಯಕ್ರಮ ನಿರೂಪಿಸಿದರು.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top