'ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ'

Upayuktha
0


ಸುರತ್ಕಲ್‌: ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಓದಿನತ್ತ ಗಮನ ಹರಿಸಬೇಕು. ಪತ್ರಿಕೆಗಳ ಓದು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಹವ್ಯಾಸವಾಗಿದ್ದು ಜ್ಞಾನ ವರ್ಧನೆಗೆ ಸಹಕಾರಿ ಎಂದು ಆಪ್ತ ಸಲಹೆಗಾರ ಮತ್ತು ಯೆನೆಪೋಯ ವೈದ್ಯಕೀಯ ಕಾಲೇಜಿನ ಡಾ. ಮನು ಆನಂದ್ ನುಡಿದರು.


ಚೇಲೈರು ಸರಕಾರಿ ಪ್ರೌಢ ಶಾಲೆಯ ಇಂಟರಾಕ್ಟ್ ಕ್ಲಬ್ ಮತ್ತು ಸುರತ್ಕಲ್ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ನಡೆದ ಮಾದಕ ವಸ್ತು ವ್ಯಸನಮುಕ್ತ ಸಮಾಜ- ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನಗಳ ದುಷ್ಪರಿಣಾಮಗಳ ಕುರಿತು ತಿಳಿದುಕೊಂಡು ಸ್ನೇಹಿತರಿಗೆ ಅರಿವು ಮೂಡಿಸಬೇಕು. ಹಿರಿಯರು ತಮ್ಮ ಮಕ್ಕಳ ಕಲಿಕೆಯ ಬಗ್ಗೆ ಗಮನ ಹರಿಸಬೇಕು ಎಂದರು.


ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಬಿ ಕುಂದರ್ ಮಾತನಾಡಿ, ಸಾಮಾಜಿಕ ಸೇವಾ ಸಂಸ್ಥೆಗಳು ಸಾಮಾಜಿಕ ಪಿಡುಗುಗಳ ಕುರಿತು ಜಾಗೃತಿ ಮೂಡಿಸಬೇಕು ಎಂದರು.


ರೋಟರಿ ಸೇವಾ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಇಂದು ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣದ ಅವಶ್ಯಕತೆ ಇದ್ದು ಅರಿವಿನ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದರು.


ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಕಿಶೋರಿ ಕುಮಾರಿ ಕೆ. ವಹಿಸಿದ್ದರು. ಇಂಟರಾಕ್ಟ್ ಕ್ಲಬ್ ಶಿಕ್ಷಕ ಸಂಯೋಜಕ ನಿತಿನ್ ಸ್ವಾಗತಿಸಿದರು. ಇಂಟರಾಕ್ಟ್ ಕ್ಲಬ್‌ನ ಅಧ್ಯಕ್ಷ ಅಭಿಶ್ ವಂದಿಸಿದರು. ರೋಟರಿ ಕ್ಲಬ್ ಕಾರ್ಯದರ್ಶಿ ರಾಮ ಮೋಹನ್.ವೈ, ರೋಟರ್‍ಯಾಕ್ಟ್ ಸಂಯೋಜಕ ಶ್ರೀನಿವಾಸ ರಾವ್, ಶೀಲಾ ಶ್ರೀನಿವಾಸ್ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top