ಇಳಕಲ್: ವರ್ಷಪೂರ್ತಿ ಶಾಲೆಯಲ್ಲಿ ನಡೆದ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಹಪಾಠ್ಯ ಚಟುವಟಿಕೆಗಳ ಸಮಗ್ರ ಅವಲೋಕನವೇ ವಾರ್ಷಿಕ ಸ್ನೇಹ ಸಮ್ಮೇಳನವಾಗಿದ್ದು, ಇದು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರ ನಡುವೆ ಪ್ರೀತಿ, ವಿಶ್ವಾಸ ಮತ್ತು ಸಹಕಾರವನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿದೆ ಎಂದು ಕಂದಗಲ್ಲ ಗ್ರಾಮದ ಪ್ರಗತಿಪರ ರೈತ ಚನ್ನಪ್ಪಗೌಡ್ರ ನಾಡಗೌಡ್ರ ಹೇಳಿದರು.
ತಾಲೂಕಿನ ಕಂದಗಲ್ಲ ಗ್ರಾಮದ ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಶಾಲೆಯಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಸಂಗಪ್ಪ ಬುಕ್ಕಿಟಗಾರ ವಹಿಸಿದ್ದರು. ಎಸ್‌ಡಿಎಂಸಿ ಸದಸ್ಯರು ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಬಸವಣ್ಣನವರ ವಚನ ನೃತ್ಯ ಹಾಗೂ ರೈತಗೀತೆ ನೃತ್ಯಗಳೊಂದಿಗೆ ಕಾರ್ಯಕ್ರಮಕ್ಕೆ ಶುಭಾರಂಭವಾಯಿತು. ಶಿಕ್ಷಕ ಎಸ್.ಎಚ್. ಭಾವಿಕಟ್ಟಿ ಸ್ವಾಗತಿಸಿದರು. ಪ್ರಭಾರಿ ಮುಖ್ಯ ಗುರು ಎಂ.ಜಿ. ಪುರದಣ್ಣವರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗುರುಮಾತೆ ಡಿ.ಎಚ್. ಮಾಳಗೌಡರವರು ವಾರ್ಷಿಕ ವರದಿಯನ್ನು ವಾಚಿಸಿದರು.
ಕಳೆದ ಸಾಲಿನ ಏಳನೇ ತರಗತಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಹಾಗೂ ಅತಿಥಿಗಳನ್ನು ಸನ್ಮಾನಿಸಲಾಯಿತು. ಒಂದರಿಂದ ಏಳನೇ ತರಗತಿವರೆಗೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪುಸ್ತಕಗಳು ಹಾಗೂ ಪೆನ್ನುಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.
ಗುರುಮಾತೆಯರಾದ ವಿ.ಎಲ್. ಪಾಟೀಲ ಮತ್ತು ಅಂಬಿಕಾ ಕಾತರಕಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಆರ್.ಬಿ. ಸವಾರ ಪ್ರಶಸ್ತಿ ವಿತರಣೆಯನ್ನು ನಡೆಸಿಕೊಟ್ಟರು. ಮೋಹನ ಬಂಡಿ ವಂದಿಸಿದರು. ಶಿವಪ್ಪ ಚಲವಾದಿ ಮಕ್ಕಳಿಗೆ ವಿಶೇಷ ನೃತ್ಯ ತರಬೇತಿ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಮಕ್ಕಳು, ಮಹಿಳೆಯರು ಸೇರಿದಂತೆ ಕಂದಗಲ್ಲ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


