ಉಡುಪಿ: ಜೇಸಿಐ ವಲಯ 15 ಇದರ ವತಿಯಿಂದ ಜೇಸಿಐ ಉಡುಪಿ ಸಿಟಿ ಇದರ ಆಶ್ರಯದಲ್ಲಿ ನೂತನ ಸದಸ್ಯರಿಗೆ 2 ದಿನಗಳ ತರಬೇತಿ ಕಾರ್ಯಕ್ರಮ ಸ್ವಾಗತ್ -2026 ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಲಯ ಅಧ್ಯಕ್ಷ ಸಂತೋಷ್ ಶೆಟ್ಟಿ ನೂತನ ಸದಸ್ಯರು ಅಂದೋಲನಕ್ಕೆ ಬಂದಾಗ ಅವರಿಗೆ ಜೇಸಿಯಲ್ಲಿ ಸಿಗುವ ಅವಕಾಶಗಳು ಮತ್ತು ಸಂಸ್ಥೆಯ ವಿವಿಧ ಕಾರ್ಯಕ್ರಮಗಳ ಕುರಿತು ಪರಿಚಯ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಯುತ್ತಿದೆ ಎಂದರು.
ಜೇಸಿಐ ಉಡುಪಿ ಸಿಟಿಯು ಉತ್ತಮವಾಗಿ ಈ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ ಎಂದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಲಯ ಬೆಳವಣಿಗೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ರಂಜಿತ್ ಎಚ್ ಡಿ ವಹಿಸಿದ್ದರು.
ಮುಖ್ಯ ತರಬೇತಿದಾರರಾಗಿ ಸತೀಶ್ ಭಟ್ ಬಿಳಿನೆಲೆ, ಸಹ ತರಬೇತುದಾರರಾಗಿ ದೀಪಕ್ ರಾಜ್ ಮತ್ತು ಅಕ್ಷತಾ ಶೆಟ್ಟಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸಂದೀಪ್ ಕುಮಾರ್ ಶುಭ ಹಾರೈಸಿದರು. ವಲಯ ಉಪಾಧ್ಯಕ್ಷೆ ಡಾ. ಹರಿಣಾಕ್ಷಿ ಕರ್ಕೇರ, ಜೆಸಿ ಉಡುಪಿ ಸಿಟಿ ಅಧ್ಯಕ್ಷೆ ಪಲ್ಲವಿ ಕೊಡಗು ವಲಯ ಅಧಿಕಾರಿಗಳು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


