ಉಡುಪಿ: ವಿಶ್ವಗೀತಾ ಪರ್ಯಾಯೋತ್ಸವ ಸ್ಮರಣಾರ್ಥ ಶ್ರೀ ಮಹಾಲಿಂಗೇಶ್ವರ ದೇವರಿಗೆ ಚಿನ್ನದ ಅಲಂಕಾರ ಅರ್ಪಣೆ

Upayuktha
0


ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ವಿಶ್ವಗೀತಾ ಪರ್ಯಾಯೋತ್ಸವದ ಸವಿ ನೆನಪಿನ ಅಂಗವಾಗಿ, ಪುತ್ತಿಗೆ ಮಠದ ಶ್ರೀಪಾದರಾದ ಯತಿಕುಲ ಚಕ್ರವರ್ತಿ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಭಗವದ್ಭಕ್ತರ ಸಹಕಾರದಿಂದ, ಸುಮಾರು ₹40 ಲಕ್ಷ ವೆಚ್ಚದಲ್ಲಿ ತಯಾರಿಸಲಾದ ಶ್ರೀ ದೇವರ ಬಲಿ ಮೂರ್ತಿಗೆ ಸಂಬಂಧಿಸಿದ ಚಿನ್ನದ ಅಟ್ಟೆ ಹಾಗೂ ಚಿನ್ನದ ಪ್ರಭಾವಳಿಗಳನ್ನು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅರ್ಪಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಈ ಕಾರ್ಯಕ್ರಮವು ಶನಿವಾರ, ಫೆಬ್ರವರಿ 7, 2026ರಂದು ಸಂಜೆ 4 ಗಂಟೆಗೆ ಹೆಜಮಾಡಿಯ ಪುರಾತನ ಅಶ್ವತ್ಥ ಕಟ್ಟೆಯಿಂದ ಆರಂಭವಾಗುವ ಭವ್ಯ ಹಾಗೂ ಶ್ರದ್ಧಾಪೂರ್ವಕ ಮೆರವಣಿಗೆಯ ಮೂಲಕ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನಕ್ಕೆ ಚಿನ್ನದ ಅಲಂಕಾರವನ್ನು ಸಮರ್ಪಿಸುವ ಮೂಲಕ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮವು ಪುತ್ತಿಗೆ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ನೆರವೇರಲಿದೆ.


ಶ್ರೀ ಮಹಾಲಿಂಗೇಶ್ವರ ದೇವರ ಸೇವೆಯ ಭಾಗವಾಗಿ ನಡೆಯುತ್ತಿರುವ ಈ ಅಪರೂಪದ ಧಾರ್ಮಿಕ ಕಾರ್ಯಕ್ರಮವು ಭಕ್ತರ ಸಹಭಾಗಿತ್ವದೊಂದಿಗೆ ರೂಪುಗೊಂಡಿದ್ದು, ಹೆಜಮಾಡಿ ಗ್ರಾಮದ ಭಕ್ತರು ಇದನ್ನು ತಮ್ಮದೇ ಮನೆಯ ದೇವರ ಅಲಂಕಾರ ಎಂಬ ಭಾವನೆಯೊಂದಿಗೆ ಶ್ರದ್ಧಾ–ಭಕ್ತಿಯಿಂದ ಅನುಸರಿಸುತ್ತಿದ್ದಾರೆ.


ಈ ಕಾರ್ಯಕ್ರಮದಲ್ಲಿ ತಂತ್ರಿವರ್ಯರು, ಅರ್ಚಕವೃಂದ, ದೇವಸ್ಥಾನದ ನಿಕಟ ಪೂರ್ವ ಅಧ್ಯಕ್ಷರು, ಜೀರ್ಣೋದ್ಧಾರ ಸಮಿತಿ, ದೇವಸ್ಥಾನದ ಅಭಿವೃದ್ಧಿ ಸಮಿತಿ, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಲಾಗಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top