ಉಡುಪಿ: ಶಿವರಾತ್ರಿ ಮಹೋತ್ಸವದ ಅಂಗವಾಗಿ ಉಡುಪಿಯ ಪುರಾತನ ಅನಂತೇಶ್ವರ ದೇವಸ್ಥಾನ ಹಾಗೂ ಚಂದ್ರಮೌಳೀಶ್ವರ ದೇವಸ್ಥಾನಗಳಲ್ಲಿ ಭಕ್ತಿಭಾವದಿಂದ ರಂಗಪೂಜೆ ನೆರವೇರಿತು. ಈ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು, ಪುತ್ತಿಗೆ ಮಠದ ಪೀಠಾಧೀಶರಾದ ಯತಿಕುಲ ಚಕ್ರವರ್ತಿ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸಂಯುಕ್ತವಾಗಿ ಭಾಗವಹಿಸಿ ಪೂಜಾ ಕೈಂಕರ್ಯ ನೆರವೇರಿಸಿದರು.
ಶಿವರಾತ್ರಿ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ, ರಂಗಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆದಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದು ಪೂಜೆಯಲ್ಲಿ ಪಾಲ್ಗೊಂಡರು. ಉಡುಪಿಯ ಧಾರ್ಮಿಕ ಪರಂಪರೆಯನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮ ಭಕ್ತರಲ್ಲಿ ಆಧ್ಯಾತ್ಮಿಕ ಉಲ್ಲಾಸವನ್ನು ಮೂಡಿಸಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


