ಉಡುಪಿ: ವಾಮನ ವಿಠ್ಠಲ ಟ್ರಸ್ಟ್ ಶೀರೂರು ಮಠ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಸಹಭಾಗಿತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯನ್ನು ಉಡುಪಿಯ ಅದರ್ಶ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಘೋಷವಾಕ್ಯ “ವೈಶಿಷ್ಟ್ಯದಲ್ಲಿ ಏಕತೆ (United by Unique)” ಆಗಿದ್ದು, ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು, ತಡೆಗಟ್ಟುವ ಕ್ರಮಗಳ ಮಹತ್ವವನ್ನು ಜನರಿಗೆ ತಿಳಿಸುವುದು ಹಾಗೂ ಸಮುದಾಯದ ಒಗ್ಗಟ್ಟಿನ ಅಗತ್ಯತೆಯನ್ನು ಎತ್ತಿ ಹಿಡಿಯುವುದು ಕಾರ್ಯಕ್ರಮದ ಉದ್ದೇಶವಾಗಿತ್ತು.
ಕಾರ್ಯಕ್ರಮವನ್ನು ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿ ಮಾತನಾಡಿ, ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದರಿಂದ ಚಿಕಿತ್ಸೆ ಸುಲಭವಾಗುತ್ತದೆ. ಸಾರ್ವಜನಿಕರು ನಿಯಮಿತ ತಪಾಸಣೆಗೆ ಒಳಗಾಗಬೇಕು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ, ಹಿರಿಯ ವೈದ್ಯಾಧಿಕಾರಿ ಡಾ. ವಾಸುದೇವ್, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮ ಅಧಿಕಾರಿ ಡಾ. ಲತಾ ನಾಯಕ್, ಆದರ್ಶ ಆಸ್ಪತ್ರೆ ಉಡುಪಿಯ ಮುಖ್ಯಸ್ಥ ಡಾ. ಜಿ. ಎನ್. ಚಂದ್ರಶೇಖರ, ಐಎಂಎ ಅಧ್ಯಕ್ಷ ಡಾ. ಅಶೋಕ್ ಕುಮಾರ್ ಹಾಗೂ ಐಎಂಎ ಕಾರ್ಯದರ್ಶಿ ಡಾ. ಮಾನಸ್ ಕೆ. ಆರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಲಕ್ಷಣಗಳು, ಚಿಕಿತ್ಸಾ ಸೌಲಭ್ಯಗಳು ಹಾಗೂ ಸರ್ಕಾರಿ ಆರೋಗ್ಯ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂವಾದಾತ್ಮಕ ಅಧಿವೇಶನಗಳನ್ನೂ ನಡೆಸಲಾಯಿತು.
ಸ್ತ್ರೀ ರೋಗ ತಜ್ಞರಾದ ಡಾ. ಕವಿತಾ ಹಾಗೂ ಆದರ್ಶ ಆಸ್ಪತ್ರೆಯ ಕ್ಯಾನ್ಸರ್ ತಜ್ಞರಾದ ಡಾ. ಆನಂದ ಎಸ್ ಮಠದ್ ಉಪನ್ಯಾಸ ನೀಡಿದರು. ಸಮಾರೋಪ ಸಮಾರಂಭದಲ್ಲಿ ಅತಿಥಿಗಳನ್ನು ಗೌರವಿಸಿ, ವಿಶ್ವ ಕ್ಯಾನ್ಸರ್ ದಿನಾಚರಣೆಯ ಸಂದೇಶವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಸಂಕಲ್ಪವನ್ನು ವ್ಯಕ್ತಪಡಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

