ವಿದುಷಿ ಸುಷ್ಮಾ ಜೋಯಿಸ್‌ಗೆ ‘ಹರಿದಾಸ ಕೌಸ್ತುಭ’ ಪ್ರಶಸ್ತಿ

Upayuktha
0


ಸಿಂಧನೂರು (ರಾಯಚೂರು): ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ ಸುಷ್ಮಾ ಜೋಯಿಸ್ ಅವರಿಗೆ ‘ಹರಿದಾಸ ಕೌಸ್ತುಭ’ ಪ್ರಶಸ್ತಿ ಪ್ರದಾನ ಮಾಡಲಾಯಿತು.


ದಾಸ ಸಾಹಿತ್ಯ ಹಾಗೂ ವ್ಯಾಸ ಸಾಹಿತ್ಯವನ್ನು ಮನೆಮನೆಗೆ ತಲುಪಿಸುವ ಉದ್ದೇಶದಿಂದ ಸಿಂಧನೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹರಿ ಭಜನೆ ಮಾಡೋ ನಿರಂತರ ಸೇವಾ ಪ್ರತಿಷ್ಠಾನದ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸಿ ಆಧ್ಯಾತ್ಮಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಯಿತು.


ಪ್ರತಿಷ್ಠಾನದ ಸಂಸ್ಥಾಪಕ ಪ್ರಸನ್ನ ಕುಲಕರ್ಣಿ ಅವರು ಸಿಂಧನೂರಿನ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಹನುಮಂತ ಆಚಾರ್, ಪುರೋಹಿತ್ ಶೇಷಶಯನಾಚಾರ್ ಜೋಯಿಸ್, ಶೋಭಾ ಜೋಯಿಸ್, ರಾಘವೇಂದ್ರ ರಾವ್ ಕುಲಕರ್ಣಿ ಹಾಗೂ ಸಂಜೀವ್ ರಾಯಸಮ್ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top