ವನ್ಯಜೀವಿ ಸಂರಕ್ಷಣೆ ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು: ರೋಹಿತ್ ರಾವ್

Upayuktha
0


 ಪುತ್ತೂರು: ವನ್ಯಜೀವಿಗಳು ಕೇವಲ ಸಸ್ಯ ಅಥವಾ ಪ್ರಾಣಿಗಳಿಗೆ ಸಂಬಂಧಿಸಿದ್ದಲ್ಲ. ಅದು ಸಂಪೂರ್ಣ ಭೂ ವ್ಯಾಪ್ತಿಗೆ ಸಂಬಂಧಿಸಿದ್ದು. ಆದರೆ ಇತ್ತೀಚಿನ ಸಮಯದಲ್ಲಿ ಮನುಷ್ಯನೇ ವನ್ಯಜೀವಿಗಳಿಗೆಂದು ಕೇವಲ ಒಂದು ವಲಯವನ್ನಷ್ಟೇ ಸೀಮಿತವಾಗಿರಿಸಿದ್ದಾನೆ. ಅಭಿವೃದ್ಧಿಯ ಹೆಸರಿನಲ್ಲಿ ಮನುಷ್ಯ ಪರಿಸರವನ್ನು ಹಾಳುಗೆಡವುತ್ತಿದ್ದಾನೆ. ವಿದೇಶಿ ಪ್ರಾಣಿಗಳನ್ನು ನೋಡಲು ಹೋಗುವ ಬದಲು ನಮ್ಮ ಸುತ್ತಮುತ್ತಲಿರುವ  ವನ್ಯಜೀವಿಗಳ ಬಗ್ಗೆ ತಿಳಿದುಕೊಳ್ಳಬೇಕಾದ ಅಗತ್ಯತೆ ಇದೆ ಎಂದು ಪರಿಸರವಾದಿ ಮತ್ತು ವನ್ಯ ಜೀವಿ ಛಾಯಾಗ್ರಾಹಕ ರೋಹಿತ್ ರಾವ್ ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಪುತ್ತೂರು ಇಲ್ಲಿನ ಪ್ರಾಣಿಶಾಸ್ತ್ರ ಹಾಗೂ ಸಸ್ಯಶಾಸ್ತ್ರ ವಿಭಾಗ ಮತ್ತು ಪರಿಸರ ಸಂಘ, ಐಕ್ಯೂಎಸಿ ಇದರ ಜಂಟಿ ಆಶ್ರಯದಲ್ಲಿ ನಡೆದ 'ಬದಲಾಗುತ್ತಿರುವ ಜಗತ್ತಿನಲ್ಲಿ ವನ್ಯಜೀವಿ ಸಂರಕ್ಷಣೆ' ಎಂಬ ವಿಚಾರದ ಬಗ್ಗೆ ಮಾತನಾಡಿದರು. 


'ಮನುಷ್ಯ ತನ್ನ ಆಸೆಗಳ ಮೇಲೆ ಮಾತ್ರ ಆದ್ಯತೆ  ನೀಡುತ್ತಿದ್ದಾನೆ. ಸರ್ಕಾರ ಹಣ ಮಾಡುವ ನೆಪದಲ್ಲಿ ಮಿತಿಮೀರಿದ ಪ್ರವಾಸೋದ್ಯಮವನ್ನು ನಡೆಸುತ್ತಿದೆ. ವನ್ಯಜೀವಿಗಳ ರಕ್ಷಣೆ ನಮ್ಮ ಕರ್ತವ್ಯ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ,'ವನ್ಯಜೀವಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಶಿಕ್ಷಣವಂತರಾಗುವುದು ಮಾತ್ರವಲ್ಲದೇ ನಮ್ಮ ಸುತ್ತಮುತ್ತಲಿರುವ ಸಸ್ಯ ಸಂಪತ್ತು ಹಾಗೂ ಜೀವ ಸಂಪತ್ತುಗಳನ್ನು ಕಾಪಾಡುವುದು ಕೂಡಾ ನಮ್ಮ ಜವಾಬ್ದಾರಿ ಎಂದರು.


ಕಾರ್ಯಕ್ರಮದಲ್ಲಿ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥೆ ದಿವ್ಯಶ್ರೀ, ಪರಿಸರ ಸಂಘದ ಸಂಯೋಜಕ ಮತ್ತು ಪ್ರಾಣಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸುಹಾಸ್ ಕೃಷ್ಣ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಮನ್ವಿತಾ ಪ್ರಾರ್ಥಿಸಿ, ಯಶ ಸ್ವಾಗತಿಸಿ, ಮನಸ್ವಿನಿ ವಂದಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಪ್ರಕೃತಿ ಮತ್ತು ಮನ್ವಿತಾ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top