ವಿವೇಕಾನಂದ ಪದವಿ ಕಾಲೇಜಿನಲ್ಲಿ ಬೋಧಕೇತರ ಸಿಬ್ಬಂದಿಗಳ ಕಾರ್ಯಾಗಾರ

Upayuktha
0


 ಪುತ್ತೂರು: ಕಾಲೇಜಿನ ಮೂಲಸೌಕರ್ಯ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವವರು ಶಿಕ್ಷಕೇತರ ಸಿಬ್ಬಂದಿಗಳು. ಸುರಕ್ಷಿತ, ಶಿಸ್ತುಬದ್ಧ ಹಾಗೂ ಸುಗಮ ಕಲಿಕಾ ವಾತಾವರಣವನ್ನು ವಿದ್ಯಾರ್ಥಿಗಳಿಗೆ ಒದಗಿಸಿ ಶಿಕ್ಷಣ ಸಂಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಶಿಕ್ಷಕೇತರ ಸಿಬ್ಬಂದಿಗಳು ನಿಸ್ವಾರ್ಥ ಸೇವೆಯ ಸಂಕೇತ ಎಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. 


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ, (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು ಇಲ್ಲಿ ಆಯೋಜಿಸಿದ ಬೋಧಕೇತರ ಸಿಬ್ಬಂದಿಗಳಿಗೆ ನಡೆದ ಕಾರ್ಯಾಗಾರದಲ್ಲಿ ಅಧ್ಯಕ್ಷರಾಗಿ ಮಾತನಾಡಿದರು. 


ಕಾರ್ಯಕ್ರಮದಲ್ಲಿ ಮಾತನಾಡಿದ ಕಾಲೇಜಿನ ಸಂಚಾಲಕ ಮುರಳಿಕೃಷ್ಣ ಕೆ.ಎನ್., ಪ್ರತಿಯೊಂದು ಶಿಕ್ಷಣ ಸಂಸ್ಥೆಯಲ್ಲಿಯೂ ಬೋಧಕೇತರ ಸಿಬ್ಬಂದಿಗಳ ಪಾತ್ರ ಬಹುಮುಖ್ಯ. ಅವರು ದಿನನಿತ್ಯದ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಸಂಸ್ಥೆಯ ಎಲ್ಲರಿಗೂ ಸಹಕಾರಿಗಳಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿದರು. 


ಕಾರ್ಯಾಗಾರದಲ್ಲಿ ಐಕ್ಯೂಎಸಿ ಘಟಕ ಸಂಯೋಜಕಿ ಮತ್ತು ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ. ರವಿಕಲಾ, ಕನ್ನಡ ವಿಭಾಗ ಮುಖ್ಯಸ್ಥ ಡಾ. ಮನಮೋಹನ ಎಂ. ಉಪಸ್ಥಿತರಿದ್ದರು. 


ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಶ್ರೀಕೃಷ್ಣಗಣರಾಜ್ ಭಟ್.ಎಸ್ ಸ್ವಾಗತಿಸಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಶಿವಪ್ರಸಾದ್ ಕೆ.ಎಸ್ ವಂದಿಸಿ, ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top