ಪದವು ಶಕ್ತಿನಗರ ಶ್ರೀ ಶನೈಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Upayuktha
0


ಶಕ್ತಿನಗರ: ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲೆ ಪ್ರಥಮ ಶ್ರೀ ಶನೀಶ್ವರ ದೇವಸ್ಥಾನದ ನಿರ್ಮಾಣ ಹಂತ ಪೂರ್ಣಗೊಳ್ಳುತ್ತಿದ್ದು, ಎಪ್ರೀಲ್ ತಿಂಗಳಿನಲ್ಲಿ ಪ್ರತಿಷ್ಟೆ ಬ್ರಹ್ಮಕಲಶೋತ್ಸವವು ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಹಿಂದೂ ಸೇವಾ ಸಮಿತಿ ಸಭಾಂಗಣದಲ್ಲಿ ನಡೆಯಿತು.


ದೇವಸ್ಥಾನ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಕದ್ರಿ ನವನೀತ ಶೆಟ್ಟಿ ಯವರು ದೇವರ ಪ್ರತಿಷ್ಟೆ, ಬ್ರಹ್ಮಕಲಶೋತ್ಸವದ ತಯಾರಿಗಳ ಬಗ್ಗೆ ವಿವರಿಸಿದರು.

ಶ್ರೀ ಶನೀಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ರಾಮಚಂದ್ರ ಚೌಟ ದೇವಸ್ಥಾನದ ನಿರ್ಮಾಣ ಹಂತದ ಕಾಮಗರಿಗಳ ಬಗ್ಗೆ ತಿಳಿಸಿದರು. ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯಶೋಧರ ಚೌಟ, ಮಹಿಳಾ ಸಮಿತಿ ಗೌರವಾಧ್ಯಕ್ಷೆ ರೋಹಿಣಿ ಟೀಚರ್, ಕಾರ್ಯಾಧ್ಯಕ್ಷ ವಕೀಲ ರಾಮ್ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಕಿಶೋರ್ ಕೊಟ್ಟಾರಿ, ಗೌರವ ನಿರ್ದೇಶಕ ಶ್ರೀನಿವಾಸ್ ಸೇರಿಗಾರ್, ವಿವಿದ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದ್ದು, ಮಹಿಳಾ ಸಮಿತಿ ಅಧ್ಯಕ್ಷೆ ವಿಜಯ ಅರುಣ್, ದೇವಸ್ಥಾನ ನಿರ್ಮಾಣ ಸಮಿತಿ ಪದಾದಿಕಾರಿಗಳಾದ ಉಮೇಶ್‌ ಪೈ ಬಬ್ಲಿ, ಅಜಯ್ ಶಕ್ತಿನಗರ, ಜನಾರ್ದನ ಅರ್ಕುಳ, ಮೋನಪ್ಪ ಪೂಜಾರಿ, ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಹಿಂದೂ ಯುವ ಸೇನಾ ಜಿಲ್ಲಾಧ್ಯಕ್ಷ ವೀರಪ್ಪ ಮೂಡುಶೆಡ್ಡೆ, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪಮ್ಮಿ‌ಕೊಡಿಯಾಲ್ ಬೈಲ್, ಕೇಂದ್ರೀಯ ಮಂಡಳಿ ಉಪಾಧ್ಯಕ್ಷರಾದ ಕೊರಗಪ್ಪ ಶೆಟ್ಟಿ, ಮಹಿಳಾ ಸಮಿತಿಯ ಮತ್ತು ಗ್ರಾಮ ಸಮಿತಿ, ಮಹಿಳಾ ಸಮಿತಿ, ಊರಿನ ಭಕ್ತರು ಉಪಸ್ಥಿತರಿದ್ದರು. ಪ್ರಚಾರ ಮಾಧ್ಯಮ ಸಂಚಾಲಕ ಪ್ರವೀಣ್ ಎಸ್ ಕುಂಪಲ ನಿರೂಪಿಸಿ, ಗೌರವ ನಿರ್ದೇಶಕ ದೇವಿಪ್ರಸಾದ್ ಕಾರ್ಮಿಕ ಕಾಲನಿ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top