ಉಡುಪಿ: ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು, ತಮ್ಮ ಪರ್ಯಾಯ ಅವಧಿಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಸೇವಾ ಕಾರ್ಯಗಳಲ್ಲಿ ಸಹಕಾರ ನೀಡಿದ ಕೆನರಾ ಬ್ಯಾಂಕ್‌ನ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರನ್ನು ಗೌರವಿಸಿ ಫಲ–ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು.
ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಹೆಚ್.ಕೆ. ಗಂಗಾಧರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಪಬಿತ್ರ ಕುಮಾರ್ ದಾಸ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸಂಜೀವ ಕುಮಾರ್, ಸಂಜಯ್ ಖಾತ್ರಿ, ಸಂದೀಪ್ ಕುಮಾರ್ ಅಗರವಾಲ್, ಉಡುಪಿ ಪ್ರಾದೇಶಿಕ ಕಚೇರಿ–1ರ ಡೆಪ್ಯುಟಿ ಜನರಲ್ ಮ್ಯಾನೇಜರ್ ಮಹಾಮಾಯಾ ಪ್ರಸಾದ್ ರಾಯ್ ಉಪಸ್ಥಿತರಿದ್ದರು.
ಅದೇ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಹಾಗೂ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಸದಸ್ಯರಾದ ಮೋಹನ್ ಭಟ್ ಮತ್ತು ಮಧುಕರ್ ಮುದ್ರಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


