ಸುಬ್ರಹ್ಮಣ್ಯನಗರದಲ್ಲಿ ಶ್ರೀ ವ್ಯಾಸರಾಜರ 487ನೇ ಆರಾಧನೆ

Upayuktha
0


ಬೆಂಗಳೂರು: ಸುಬ್ರಹ್ಮಣ್ಯನಗರದ ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರ ಆದೇಶದಂತೆ ಮಾರ್ಚ್ 7ರಂದು ಶ್ರೀ ವ್ಯಾಸರಾಜ ಗುರುಸಾರ್ವಭೌಮರ 487ನೇ ಆರಾಧನಾ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು.


ಕಾರ್ಯಕ್ರಮಗಳು: ಬೆಳಗ್ಗೆ ಅಷ್ಟೋತ್ತರ ಪಾರಾಯಣದೊಂದಿಗೆ ಫಲಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಭಜನಾ ಮಂಡಳಿಯ ಸದಸ್ಯರ ಗಾಯನದೊಂದಿಗೆ ರಾಜಬೀದಿ ಉತ್ಸವ, ಪಂಡಿತರಿಂದ ಪ್ರವಚನ, ಮಹಾಮಂಗಳಾರತಿ, ಅಲಂಕಾರ ಪಂಕ್ತಿ ಸೇವಾ, ತೀರ್ಥಪ್ರಸಾದ ವಿನಿಯೋಗ ನಡೆಯಿತು.

ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವ ಗಾಯಕ ಕೆ.ಪಿ. ಶಿಶಿರ್ ಇವರು  ಹಲವಾರು ಅಪರೂಪದ ಹರಿದಾಸರ ಪದಗಳನ್ನು  ಸುಶ್ರಾವ್ಯವಾಗಿ ಪ್ರಸ್ತುತಪಡಿಸಿದರು.


ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ವಿದ್ವಾನ್ ಎಂ.ಎಸ್. ಗೋವಿಂದಸ್ವಾಮಿ ಹಾಗೂ ತಬಲಾ ವಾದನದಲ್ಲಿ ಧ್ರುವ ಆಚಾರ್ಯ ಸಾಥ್ ನೀಡಿದರು. ಭಕ್ತಾದಿಗಳು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹರ್ಷ ವ್ಯಕ್ತಪಡಿಸಿದರು ಎಂದು ಶ್ರೀಮಠದ ವಿಚಾರಣಾಕರ್ತರಾದ  ಸೋಸಲೆ ಪ್ರಕಾಶ್ ಅವರು ತಿಳಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top