ಮಾ. 21ರಿಂದ ಕಾಕೋಳು ಶ್ರೀ ವೇಣುಗೋಪಾಲಸ್ವಾಮಿಯ 93ನೇ ಬ್ರಹ್ಮರಥೋತ್ಸವ

Upayuktha
0


ಬೆಂಗಳೂರು (ರಾಜಾನುಕುಂಟೆ): ಬೆಂಗಳೂರು ಹೊರವಲಯದ ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ ಸಮೀಪದ ಐತಿಹಾಸಿಕ ಕಾಕೋಳು ಗ್ರಾಮದಲ್ಲಿ ನೆಲೆಯಾಗಿರುವ ಶ್ರೀ ವೇಣುಗೋಪಾಲಸ್ವಾಮಿ ಸನ್ನಿಧಿಯಲ್ಲಿ 93ನೇ ವರ್ಷದ ಬ್ರಹ್ಮರಥೋತ್ಸವವು ಮಾರ್ಚ್ 21ರಿಂದ ಅದ್ಧೂರಿಯಾಗಿ ಚಾಲನೆಗೊಳ್ಳಲಿದೆ.

ಐತಿಹಾಸಿಕ ಹಿನ್ನೆಲೆ:
ದಾಸಸಾಹಿತ್ಯದ ಆದ್ಯಪ್ರವರ್ತರಾದ ಶ್ರೀ ಶ್ರೀಪಾದರಾಜರಿಂದ ಪ್ರತಿಷ್ಠಾಪಿಸಲ್ಪಟ್ಟ ಈ ಚತುರ್ಭುಜ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನವು ಈ ಭಾಗದ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. 1933ರಲ್ಲಿ ಆರಂಭವಾದ ಮೂಲ ವಿಗ್ರಹಗಳ ಪುನಃ ಪ್ರತಿಷ್ಠಾಪನೆಯ ಸ್ಮರಣಾರ್ಥವಾಗಿ ಪ್ರತಿ ವರ್ಷ ಬ್ರಹ್ಮರಥೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. 9 ದಶಕಗಳಿಗೂ ಹೆಚ್ಚು ಕಾಲದಿಂದ ಗ್ರಾಮಸ್ಥರು ಮತ್ತು ನಾಲ್ಕು ತಲೆಮಾರಿನ ಭಕ್ತರು ಈ ಪರಂಪರೆಯನ್ನು ಅಚ್ಚುಕಟ್ಟಾಗಿ ಮುಂದುವರಿಸುತ್ತಿದ್ದಾರೆ.


ಕಾರ್ಯಕ್ರಮದ ವಿವರ:
ಮಾರ್ಚ್ 21ರಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿದ್ದು, ಮಾರ್ಚ್ 23ರಂದು (ಚೈತ್ರ ಶುದ್ಧ ಪಂಚಮಿ) ಅದ್ಧೂರಿ ಬ್ರಹ್ಮರಥೋತ್ಸವ ಜರುಗಲಿದೆ. ಪಾಂಚಜನ್ಯ ಪ್ರತಿಷ್ಠಾನದ ಸಹಯೋಗದೊಂದಿಗೆ ಈ ಬಾರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top