ಎ. ಶಾಮರಾವ್ ಸ್ಮಾರಕ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ 2026 ಪ್ರಕಟ

Upayuktha
0


ಮಂಗಳೂರು: ಮಂಗಳೂರಿನ ಎ. ಶಾಮರಾವ್ ಪ್ರತಿಷ್ಠಾನವು ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢ ಶಾಲಾ ವಿಭಾಗ ಹಾಗೂ ಪದವಿ ಪೂರ್ವ ವಿಭಾಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರತಿಷ್ಠಿತ ಎ. ಶಾಮರಾವ್ ಸ್ಮಾರಕ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡುತ್ತಿದ್ದು 2026ರ ಸಾಲಿನ ಈ ಪ್ರಶಸ್ತಿಗೆ ಕಡಬ ತಾಲೂಕಿನ ಸರಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಡಾ.ವೇದಾವತಿ ಬಿ ಮತ್ತು ಶ್ರೀ ರಾಜೇಶ್ ಕದ್ರಿ, ಪ್ರಾಂಶುಪಾಲರು ಹಾಗೂ ಆಡಳಿತಾಧಿಕಾರಿ, ಶ್ರೀ ರಾಮಾಶ್ರಮ ವಿದ್ಯಾಸಂಸ್ಥೆ, ಕೊಂಚಾಡಿ, ಮಂಗಳೂರು ಇವರು ಆಯ್ಕೆಯಾಗಿದ್ದಾರೆ.


ಇವರಿಗೆ ಮುಕ್ಕದಲ್ಲಿಯ ಶ್ರೀನಿವಾಸ್ ಶೈಕ್ಷಣಿಕ ಆವರಣದಲ್ಲಿ ಮಾರ್ಚ್ 31ರಂದು ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಶ್ರೀನಿವಾಸ ಯುನಿವರ್ಸಿಟಿಯ ಕುಲಾದಿಪತಿಯವರಾದ ಡಾ. ಎ. ಶ್ರೀನಿವಾಸ ರಾವ್‌ರವರ, ಅಧ್ಯಕ್ಷತೆಯಲ್ಲಿ ನಡೆಯುವ ಎ. ಶಾಮರಾವ್ ಪ್ರತಿಷ್ಠಾನದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಯೋಜಕ ಡಾ.ಎ.ಆರ್ ಶಬರಾಯ ತಿಳಿಸಿರುತ್ತಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top