ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ "ವಾಣಿಜ್ಯ ವ್ಯೂಹ" ಎಂಬ ಶಿರೋನಾಮೆಯಲ್ಲಿ ಭಿತ್ತಿಪತ್ರದ ಉದ್ಘಾಟನಾ ಕಾರ್ಯಕ್ರಮವು ಅಕ್ಷಯ ಕಾಲೇಜಿನಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಕೇಶವ್ ಅಮೈ , ಆಡಳಿತ ನಿರ್ದೇಶಕರು ಎಸ್.ಆರ್.ಕೆ ಲ್ಯಾಡರ್ಸ್ ಪುತ್ತೂರು ಇವರು ಉದ್ಘಾಟಿಸಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಎಲ್ಲಿದ್ದರೂ ತಮ್ಮ ಬದುಕನ್ನು ರೂಪಿಸುವಲ್ಲಿ ಯಶಸ್ವಿಯಾಗುತ್ತಾರೆ ಹಾಗೂ ಸಿಕ್ಕ ಅವಕಾಶಗಳನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಂಡು ಜೀವನದಲ್ಲಿ ಯಶಸ್ವಿಯನ್ನು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಅಕ್ಷಯ್, ಕಾರ್ಯದರ್ಶಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು ಇವರು ಉದ್ಘಾಟಕರಾದ ಕೇಶವ್ ಅಮೈ ಅವರನ್ನು ಪ್ರೇರಣೆಯಾಗಿ ತೆಗೆದುಕೊಂಡು ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಪ್ರೇರಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಅವರು ಮಾತನಾಡಿ, ಕಾಲೇಜಿನಲ್ಲಿ ಭಿತ್ತಿಪತ್ರ ವನ್ನು ಅನಾವರಣಗೊಳಿಸಿದ ವಾಣಿಜ್ಯ ವಿಭಾಗಕ್ಕೆ ಶುಭಹಾರೈಸಿ, ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ತೋರಿಸಿಕೊಳ್ಳಲು ಇಂತಹ ಭಿತ್ತಿಪತ್ರಗಳು ಒಂದು ಉತ್ತಮ ವೇದಿಕೆ ಎಂದು ಹೇಳಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಕಿಶೋರ್ ಕುಮಾರ್ ರೈ ಕೆ ಹಿತನುಡಿಗಳನ್ನಾಡಿದರು.
ವಾಣಿಜ್ಯ ಸಂಘದ ಸಂಯೋಜಕರಾದ ಕುಮಾರಿ ಮೇಘಶ್ರೀ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇನ್ವಿಕ್ತ ವಾಣಿಜ್ಯ ಸಂಘದ ಕಾರ್ಯದರ್ಶಿ ಕುಮಾರಿ ವಿಂಧುಶ್ರೀ ಉದ್ಘಾಟಕರನ್ನು ಪರಿಚಯಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಸುಶ್ಮಿತಾ ಪ್ರಾರ್ಥಿಸಿ, ಇನ್ವಿಕ್ತ ವಾಣಿಜ್ಯ ಸಂಘದ ಅಧ್ಯಕ್ಷ ವಿಖ್ಯಾತ್ ಸ್ವಾಗತಿಸಿ, ಕೋಶಾಧಿಕಾರಿ ವೀಕ್ಷಿತ್ ವಂದಿಸಿ, ಅಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


