ಚಿತ್ರಾಪುರ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್‌ಗೆ ಹಳೆ ವಿದ್ಯಾರ್ಥಿಗಳ ಭೇಟಿ

Upayuktha
0


ಸುರತ್ಕಲ್‌: ಕುಳಾಯಿ ಚಿತ್ರಾಪುರ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್‌ಗೆ ಎಲ್ ಅಂಡ್ ಟಿ ಸಂಸ್ಥೆಯ ಹಿರಿಯ ನಿವೃತ್ತ ಅಧಿಕಾರಿ ಹಾಗೂ ಶಾಲಾ ಹಳೆ ವಿದ್ಯಾರ್ಥಿ ನಿರಂಜನ ಚಿತ್ರಾಪುರ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.


ವಿದ್ಯಾರ್ಥಿಗಳು ಉತ್ತಮವಾಗಿ ಕಲಿತು ಉನ್ನತ ಸ್ಥಾನಕ್ಕೇರಬೇಕು. ಶಾಲಾ ಅಭಿವೃದ್ದಿಗೆ ಹಳೆ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದರು.


ಹಳೆ ವಿದ್ಯಾರ್ಥಿಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ನಿರಂಜನ ಅವರು ದತ್ತಿ ನಿಧಿಯ ನೀಡಿಕೆ ಮತ್ತು ಸ್ಮಾರ್ಟ್ ಕ್ಲಾಸ್‌ಗೆ ಪ್ರೊಜೆಕ್ಟರ್ ಕೊಡುಗೆ ನೀಡಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

ನಿವೃತ್ತ ಶಿಕ್ಷಕ ರಾಘವೇಂದ್ರ ರಾವ್ ಚಿತ್ರಾಪುರ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು. ನೀತಾ ತಂತ್ರಿ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top