ಮಂಗಳೂರು ವಿ ವಿ ಪವರ್‌ಲಿಫ್ಟಿಂಗ್ ಆಳ್ವಾಸ್ ಸಮಗ್ರ ಚಾಂಪಿಯನ್

Upayuktha
0

ಸತತ 22ನೇ ಬಾರಿ ಸಮಗ್ರ ತಂಡ ಪ್ರಶಸ್ತಿ



ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ರೋಶನಿ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಸತತ 22ನೇ ಬಾರಿ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ.


ಮಹಿಳಾ ವಿಭಾಗದಲ್ಲಿ 02 ಚಿನ್ನ, 03 ಬೆಳ್ಳಿ ಹಾಗೂ 03 ಕಂಚಿನ ಪದಕದೊಂದಿಗೆ ಒಟ್ಟು 36 ಅಂಕ ಸಂಪಾದಿಸಿ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ 01 ಚಿನ್ನ, 02 ಬೆಳ್ಳಿ ಹಾಗೂ 03 ಕಂಚಿನ ಪದಕದೊಂದಿಗೆ ಒಟ್ಟು 27 ಅಂಕ ಸಂಪಾದಿಸಿ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.


ಆಳ್ವಾಸ್ ಕಾಲೇಜು ಪುರುಷರ ಮತ್ತು ಮಹಿಳೆಯರ ಎರಡೂ ವಿಭಾಗದಲ್ಲೂ ತಂಡ ಪ್ರಶಸ್ತಿಯನ್ನು ಪಡೆದು ಸತತ 22ನೇ ಬಾರಿ ಸಮಗ್ರ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.


ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top