ಮಂಗಳೂರಿನಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ – ಮಾರ್ಚ್ 21ರಂದು ಭವ್ಯ ಕಾರ್ಯಕ್ರಮ

Upayuktha
0


ಮಂಗಳೂರು, ಮಾರ್ಚ್ 18: ಆಳ್ವಾಸ್ ನುಡಿಸಿರಿ–ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮವು ಮಾರ್ಚ್ 21ರಂದು ಸಂಜೆ 6.15ಕ್ಕೆ ನಗರದ ಲಾಲ್‌ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿರುವ ಕೀರ್ತಿಶೇಷ ಡಾ. ಎನ್. ವಿನಯ್ ಹೆಗ್ಡೆ ವೇದಿಕೆಯಲ್ಲಿ ನಡೆಯಲಿದೆ.


ಈ ಕುರಿತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅವರು ಇಂದು ನಗರದ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರಗಳನ್ನು ನೀಡಿದರು.


ಕಾರ್ಯಕ್ರಮದ ಅಂಗವಾಗಿ ಪ್ರಾರಂಭದಲ್ಲಿ 45 ನಿಮಿಷಗಳ ಸಭಾಕಾರ್ಯಕ್ರಮ ನಡೆಯಲಿದ್ದು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ ನೆರವೇರಿಸಲಿದ್ದಾರೆ. ಮಂಗಳೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.


ಸಮಾಜದ ವಿವಿಧ ಸ್ತರಗಳ ಗಣ್ಯರು ಈ ಸಂದರ್ಭದಲ್ಲಿ ಗೌರವ ಉಪಸ್ಥಿತಿಯಲ್ಲಿ ಭಾಗವಹಿಸಲಿದ್ದಾರೆ. ಈ ಸಾಂಸ್ಕೃತಿಕ ವೈಭವವನ್ನು ಕೀರ್ತಿಶೇಷ ಡಾ. ಎನ್. ವಿನಯ್ ಹೆಗ್ಡೆಯವರಿಗೆ ಸಮರ್ಪಿಸಲಾಗಿದೆ.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರು ಭಾರತೀಯ ಸಂಸ್ಕೃತಿಯ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಹಲವಾರು ಕಲಾಪ್ರಕಾರಗಳನ್ನು ಪ್ರದರ್ಶಿಸಲಿದ್ದಾರೆ. ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ ‘ಅಷ್ಟಲಕ್ಷ್ಮಿ’, ಬಡಗುತಿಟ್ಟು ಯಕ್ಷಗಾನ ‘ಶಂಕರಾರ್ಧ ಶರೀರಿಣಿ’, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಖಂಬ ಮತ್ತು ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ‘ವರ್ಷಧಾರೆ’, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ‘ಹಿರಣ್ಯಾಕ್ಷ ವಧೆ’ ಹಾಗೂ ಬೊಂಬೆ ವಿನೋದಾವಳಿಯ ಪ್ರದರ್ಶನಗಳು ಪ್ರಮುಖ ಆಕರ್ಷಣೆಯಾಗಿವೆ.


ಪ್ರೇಕ್ಷಕರ ಅನುಕೂಲಕ್ಕಾಗಿ 8,000ಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಕಾರ್ಯಕ್ರಮವು ನಿಗದಿತ ಸಮಯಕ್ಕೆ ಪ್ರಾರಂಭವಾಗಿ, ಸಮಯಪಾಲನೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.


ಕರ್ನಾಟಕದ ಪ್ರಮುಖ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ವು ದೇಶದ ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯತೆಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಮಹತ್ವದ ವೇದಿಕೆಯಾಗಿದೆ. ಸಮಾಜದಲ್ಲಿ ಸಕಾರಾತ್ಮಕ ಮೌಲ್ಯಗಳನ್ನು ಹರಡುವ ದಿಕ್ಕಿನಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top