ಬದಿಯಡ್ಕ: ಏತಡ್ಕ ಗದ್ದೆಮನೆ ಶ್ರೀ ನಾಗ ರಕ್ತೇಶ್ವರಿ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಅಪಾರ ಭಕ್ತಿಭಾವ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಊರು ಹಾಗೂ ಪರವೂರಿನಿಂದ ಆಗಮಿಸಿದ ಅನೇಕ ಭಕ್ತಾಭಿಮಾನಿಗಳು ಶ್ರೀ ದೈವದ ನೇಮವನ್ನು ಕಣ್ತುಂಬಿಕೊಂಡು ಅನ್ನಪ್ರಸಾದ ಸ್ವೀಕರಿಸಿ ದೈವದ ಕೃಪೆಗೆ ಪಾತ್ರರಾದರು.
ನೇಮೋತ್ಸವದ ಅಂಗವಾಗಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶೇಷ ಆಕರ್ಷಣೆಯಾಗಿದ್ದು, ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.), ಕಾಸರಗೋಡು ಸಂಸ್ಥೆಯವರಿಂದ ಸಾಂಸ್ಕೃತಿಕ ಕಲಾ ವೈಭವ ವರ್ಣರಂಜಿತವಾಗಿ ಮೂಡಿಬಂದಿತು. ನೂರಾರು ಪ್ರೇಕ್ಷಕರು ಕಾರ್ಯಕ್ರಮವನ್ನು ಆಸ್ವಾದಿಸಿ ಕಲಾವಿದರ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗುರುರಾಜ್ ಕಾಸರಗೋಡು ಅವರ ಸಂಯೋಜನೆ ಹಾಗೂ ನಿರೂಪಣೆಯೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಹಂಶಿತ್ ಆಳ್ವ, ಜಯಲಕ್ಷ್ಮಿ ಕುಲಾಲ್, ವರ್ಷಾ ಶೆಟ್ಟಿ, ದೀಕ್ಷಾ ಕುಲಾಲ್, ನವ್ಯಶ್ರೀ ಕುಲಾಲ್, ಆರಾಧ್ಯ ಪೂಜಾರಿ, ಹರ್ಷಾ ಕುಲಾಲ್, ಧನ್ಯಶ್ರೀ ಕುಲಾಲ್, ರಮ್ಯಾ ಶಿವರಾಜ್, ಭಾನ್ವಿ ಕುಲಾಲ್, ಲಿಶಿಕಾ ಎಸ್., ಸಾಯಿ ಪ್ರಣಮ್ಯ ಸೇರಿದಂತೆ ಸಂಸ್ಥೆಯ ಅನೇಕ ಪ್ರತಿಭಾವಂತ ಕಲಾವಿದರು ತಮ್ಮ ನೃತ್ಯ ಹಾಗೂ ಸಾಂಸ್ಕೃತಿಕ ಪ್ರತಿಭೆಯನ್ನು ಮನೋಜ್ಞವಾಗಿ ಪ್ರದರ್ಶಿಸಿ ಪ್ರೇಕ್ಷಕರಿಂದ ಭಾರೀ ಪ್ರಶಂಸೆ ಗಳಿಸಿದರು. ನಯನ ಮನೋಹರವಾಗಿ ನಡೆದ ಈ ಕಾರ್ಯಕ್ರಮವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ದೈವಸ್ಥಾನದ ಗೌರವಾಧ್ಯಕ್ಷರಾದ ಕೆ. ರಾಧಾಕೃಷ್ಣ ಭಟ್ ಪತ್ತಡ್ಕ, ಅಧ್ಯಕ್ಷರಾದ ಬಾಲಕೃಷ್ಣ ಕೆ.ಕೆ., ಡಾ. ಪ್ರಕಾಶ್ ವೈ.ಎಚ್., ಹರಿಪ್ರಸಾದ್ ರೈ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ ಸಂಸ್ಥೆಯನ್ನು ಗೌರವಿಸಲಾಯಿತು. ಇದೇ ವೇಳೆ ಸಂಸ್ಥೆಯ ಅಪ್ರತಿಮ ಕಲಾವಿದರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


