ಸೋದೆ ವಾದಿರಾಜ ಮಠದ ಆರಾಧನೆ: ರಸಪ್ರಶ್ನೆ ವಿಜೇತರಿಗೆ ಬಹುಮಾನ ವಿತರಣೆ

Upayuktha
0


ಬೆಂಗಳೂರು: ಸೋದೆ ವಾದಿರಾಜ ಮಠದ ಆರಾಧನಾ ಮಹೋತ್ಸವದ ಅಂಗವಾಗಿ ಆಯೋಜಿಸಲಾದ 21ನೇ ವರ್ಷದ ರಸಪ್ರಶ್ನೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಈ ವರ್ಷದ ರಸಪ್ರಶ್ನೆಯ ವಿಷಯವಾಗಿ ‘ವೈಕುಂಠ ವರ್ಣನೆ’ ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮವನ್ನು ಶ್ರೀಧರ ರಾಯಸಂ ಅವರು ನಡೆಸಿಕೊಟ್ಟರು.


ಕಾರ್ಯಕ್ರಮದಲ್ಲಿ ವಿಜೇತರಿಗೆ ಸೋದೆ ಮಠದ ಶ್ರೀಪಾದಂಗಳವರಾದ ಶ್ರೀ ಶ್ರೀ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಬಹುಮಾನಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಮಂತ್ರಾಕ್ಷತೆ ನೀಡಿ ಭಾಗವಹಿಸಿದ ಎಲ್ಲರಿಗೂ ಆಶೀರ್ವಾದ ಮಾಡಿದರು.


ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಶ್ರೀಧರ ರಾಯಸಂ ಅವರಿಗೂ ಶ್ರೀಪಾದರು ಆಶೀರ್ವಚನ ನೀಡಿ ಸತ್ಕರಿಸಿದರು.


ಈ ಸಂದರ್ಭದಲ್ಲಿ ಭಕ್ತರು, ವಿದ್ಯಾರ್ಥಿಗಳು ಹಾಗೂ ಹಲವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top