ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಸತೀಶ್ ಎಂ. ಪ್ರಭು ನಿಧನ

Upayuktha
0


ಮಂಗಳೂರು: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರ, ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸತೀಶ್‌ ಎಂ.ಪ್ರಭು (60 ವರ್ಷ) ಮಂಗಳವಾರ ನಿಧನರಾದರು.


ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಿದುಳಿನಲ್ಲಿ ರಕ್ತಸ್ರಾವ ಆಗಿದೆ ಎಂದು ವೈದ್ಯರು ತಿಳಿಸಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾದ ಅವರು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಬಿಜೆಪಿ ಯುವ ಮೋರ್ಚಾಗಳಲ್ಲೂ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಬಿಜೆಪಿಯ ಮಂಗಳೂರು ನಗರ ದಕ್ಷಿಣ ಮಂಡಲದ ಮಾಜಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.


ಮಣ್ಣಗುಡ್ಡೆಯ ಸಂಘನಿಕೇತನದ ಕೇಶವ ಸಂವರ್ಧನ ಸಮಿತಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಸೇರಿದಂತೆ ಹತ್ತು ಹಲವು ಸಂಘ ಸಂಸ್ಥೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕುದ್ರೋಳಿಯಲ್ಲಿ ಮುದ್ರಣ ಸಂಸ್ಥೆಯನ್ನು ನಡೆಸುತ್ತಿದ್ದರು. ಅವರಿಗೆ ತಾಯಿ, ಸಹೋದರರು, ಪತ್ನಿ ಮತ್ತು ಪುತ್ರ ಇದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top