ಬೆಳ್ತಂಗಡಿ: ಪಿ. ವೆಂಕಟ್ರಮಣ ಭಟ್ ನಿಧನ

Upayuktha
0


ಬೆಳ್ತಂಗಡಿ: ಪಾದೆಕಲ್ಲು ಮನೆತನದ ಬೆಳ್ತಂಗಡಿ ನಿವಾಸಿ ಕೃಷಿಕರು, ತಾಲೂಕು ಬೋರ್ಡ್ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸಾಮಾಜಿಕ, ಧಾರ್ಮಿಕ ಮುಂದಾಳು ಆಗಿದ್ದ ಪಿ. ವೆಂಕಟ್ರಮಣ ಭಟ್ (88) ಅವರು ಇಂದು ಬೆಳಗ್ಗೆ 11:30ರ ವೇಳೆ ನಿಧನರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ನಿಧನರಾದರು.


ಅವರಿಗೆ ಪತ್ನಿ, ಐವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ಅವರ ಅಂತ್ಯಕ್ರಿಯೆ ಇಂದು ಅಪರಾಹ್ನ 3 ಗಂಟೆಯ ನಂತರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


ಕೃಷಿಕರಾಗಿ ಕಠಿಣ ಪರಿಶ್ರಮದಿಂದ ಬೆಳೆದು ಬಂದ ಅವರು ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಾಕಷ್ಟು ಸಕ್ರಿಯರಾಗಿ ಸೇವೆ ಸಲ್ಲಿಸಿದ್ದರು. ಸಮೀಪದ ಬಂಧುಗಳು ಮತ್ತು ಆಪ್ತ ವರ್ಗದಲ್ಲಿ 'ಕೊಂಚಣ್ಣ' (ಕೊಂಚ ಭಟ್ರು) ಎಂದೇ ಖ್ಯಾತರಾಗಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top