ತೆಂಕನಿಡಿಯೂರು ಕಾಲೇಜು: ರಕ್ತದಾನ ಶಿಬಿರ

Upayuktha
0


ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ , ರೆಡ್ ಕ್ರಾಸ್ ಸೊಸೈಟಿ ಉಡುಪಿ, ರೆಡ್ ಕ್ರಾಸ್ ಮತ್ತು ಬ್ಲಡ್ ಬ್ಯಾಂಕ್ ಕುಂದಾಪುರ, ಐಕ್ಯೂಎಸಿ, ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್., ರೋವರ್ಸ್ ರೇಂಜರ್ಸ್ ಘಟಕ, ಸಾಂಸ್ಕೃತಿಕ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ದೈಹಿಕ ಶಿಕ್ಷಣ ವಿಭಾಗ, ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 18 ರಂದು ರಕ್ತದಾನ ಶಿಬಿರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. 


ಉದ್ಘಾಟನೆ ನೆರವೇರಿಸಿ ಮಾತನಾಡಿದ ರೆಡ್ ಕ್ರಾಸ್ ಕುಂದಾಪುರ ಬ್ಲಡ್ ಬ್ಯಾಂಕ್ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದ ಅತೀವ ಕೊರತೆ ಇದ್ದು, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಕಳಕಳಿಯಿಂದ ರಕ್ತದಾನ ಮಾಡಲು ಮುಂದೆ ಬರಬೇಕು ಎಂದರು. ರಕ್ತದಾನ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡುವ ಜತೆಗೆ ಸಾಮಾಜಿಕ ಸ್ವಾಸ್ಥ್ಯ ಕಾಪಾಡಿದಂತಾಗುತ್ತದೆ. ಈ ಕಾರಣದಿಂದ ರಕ್ತದಾನ ಎಲ್ಲಾ ದಾನಕ್ಕಿಂತ ಶ್ರೇಷ್ಠ ದಾನವಾಗಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ ಗಾಂವಕರ್ ಅವರು, ಶೈಕ್ಷಣಿಕ ಕಲಿಕೆಯ ಜತೆಗೆ ಸಾಮಾಜಿಕ ಸೇವಾ ಮನೋಭಾವನೆಯನ್ನು ಯುವಜನತೆ ಬೆಳೆಸಿಕೊಂಡಲ್ಲಿ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದರು.


ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಉಡುಪಿ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷರಾದ ದಿನೇಶ್ ಕಿಣಿ, ಹಳೆ ವಿದ್ಯಾರ್ಥಿ ಸಂಘ ಉಪಾಧ್ಯಕ್ಷರಾದ ಮುನಾವರ್ ಖಾಸಿ, ಐಕ್ಯೂಎಸಿ ಸಂಯೋಜಕ ಡಾ. ವಿಷ್ಣುಮೂರ್ತಿ ಪ್ರಭು,ಎನ್.ಎಸ್.ಎಸ್. ಯೋಜನಾಧಿಕಾರಿ ಪ್ರಸಾದ್ ಎಚ್. ಎಂ., ಕುಂದಾಪುರ ರೆಡ್ ಕ್ರಾಸ್ ಕಾರ್ಯದರ್ಶಿ ಶಿವರಾಮ್ ಶೆಟ್ಟಿ, ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಯೂತ್ ರೆಡ್ ಕ್ರಾಸ್ ಸಂಯೋಜಕರಾದ ಪ್ರಶಾಂತ ನೀಲಾವರ ಸ್ವಾಗತಿಸಿ ರೋವರ್ಸ್ ರೇಂಜರ್ಸ್ ಸಂಯೋಜಕ ಮರ್ವಿನ್ ಡಿಸೋಜಾ ವಂದಿಸಿದರು. ರೆಡ್ ಕ್ರಾಸ್ ನಾಯಕಿ ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಪ್ರಥ್ವಿ ಕಾರ್ಯಕ್ರಮ ನಿರೂಪಿಸಿದರು.


ಕುಂದಾಪುರ ರೆಡ್ ಕ್ರಾಸ್ ರಕ್ತನಿಧಿಗೆ 85 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಬಳಿಕ, ರೆಡ್ ಕ್ರಾಸ್ ವಿದ್ಯಾರ್ಥಿಗಳಿಗೆ ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯ ತ್ಯಾಗರಾಜನ್ ಅವರು ಪ್ರಥಮ ಚಿಕಿತ್ಸೆ ತರಬೇತಿ ನೀಡಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top